Congress leader’s controversial statement: ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ನೀಡಿದ ಜಡ್ಜ್ ನಾಲಿಗೆಯನ್ನು ಕಟ್ ಮಾಡುತ್ತೇವೆ! ವಿವಾದಿತ ಹೇಳಿಕೆ ನಿಡಿದ ಕಾಂಗ್ರೆಸ್ ನಾಯಕ
Congress leader’s controversial statement : ಮೋದಿ(Modi) ಎಂಬ ಉಪನಾಮ ಹೊಂದಿರುವ ಎಲ್ಲರೂ ಕಳ್ಳರೇ ಎಂದು ಹೇಳಿಕೆ ನೀಡಿ ಮಾನಹಾನಿ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ದೂರಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ಸೂರತ್(Surath) ನ್ಯಾಯಾಲಯದ ನ್ಯಾಯಾದೀಶರ ನಾಲಿಗೆ ಕತ್ತರಿಸುವುದಾಗಿ ಕಾಂಗ್ರೆಸ್ ನಾಯಕರೊಬ್ಬರು (Congress leader’s controversial statement) ನಾಲಗೆ ಹರಿಬಿಟ್ಟಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಹೌದು, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಕಾಲ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ “ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ” ಎಂದು ಹೇಳಿದ್ದಾರೆ. ತಮಿಳುನಾಡು ದಿಂಡಿಗಲ್‌ನ ಕಾಂಗ್ರೆಸ್ ನಾಯಕ ಮಣಿಕಂಠನ್ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಣಿಕಂಠನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸದ್ದನ್ನು ಖಂಡಿಸಿ ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ನ ಎಸ್‌ಸಿ ಹಾಗೂ ಎಸ್‌ಟಿ ವಿಭಾಗದಿಂದ ಪ್ರತಿಭಟನೆ ನಡೆಸಲಾಗಿದೆ. ಇದೇ ವೇಳೆ ಮಾತನಾಡಿದ ಮಣಿಕಂದನ್, “ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ಮಾರ್ಚ್ 23ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಎಚ್. ವರ್ಮಾ ಅವರೇ ಕೇಳಿ, ಕಾಂಗ್ರೆಸ್ ಯಾವಾಗ ಅಧಿಕಾರಕ್ಕೆ ಬರುತ್ತದೆಯೋ, ಆಗ ನಿಮ್ಮ ನಾಲಗೆಯನ್ನು ಕತ್ತರಿಸಲಾಗುತ್ತದೆ” ಎಂದಿದ್ದಾರೆ. ಅಲ್ಲದೆ ಅವರಿಗೆ ಜೈಲು ಶಿಕ್ಷೆ ವಿಧಿಸಲು ನೀವ್ಯಾರು ಎಂದೂ ಪ್ರಶ್ನೆ ಮಾಡಿದ್ದಾರೆ.
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಮೂರು ಸೆಕ್ಷನ್‌ಗಳ ಅಡಿಯಲ್ಲಿ ದಿಂಡಿಗಲ್ ಪೊಲೀಸರು ಮಣಿಕಂದನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು “ನ್ಯಾಯಾಂಗಕ್ಕೆ ಬೆದರಿಕೆ ಹಾಕುವ ಪಕ್ಷಗಳಿಗೆ” ನ್ಯಾಯಾಲಯಗಳು ರಾಹುಲ್ ಗಾಂಧಿಯನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದೂ ಹೇಳಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಹುಲ್ ಗಾಂಧಿ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುತ್ತೇವೆ ಎಂದು ತಮಿಳುನಾಡು ಕಾಂಗ್ರೆಸ್ ನಾಯಕ ಹೇಳುತ್ತಾರೆ. ನ್ಯಾಯಾಂಗಕ್ಕೆ ಬೆದರಿಕೆ ಹಾಕುತ್ತಿರುವ ಅವರ ಪಕ್ಷದ ವ್ಯಕ್ತಿಗಳಿಗೆ ನ್ಯಾಯಾಲಯಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ರಾಹುಲ್ ಗಾಂಧಿಯನ್ನು ಹೊಣೆಗಾರರನ್ನಾಗಿ ಮಾಡುತ್ತವೆಯೇ?” ಎಂದು ಟ್ವೀಟ್ ಮಾಡಿದ್ದಾರೆ.
TN Congress Leader says once they come into power they will cut the tongue of the judge who gave verdict against Rahul.
As usual @tnpoliceoffl have not taken any action. pic.twitter.com/asPrwcgsk9
— CTR.Nirmal kumar (@CTR_Nirmalkumar) April 7, 2023
ಇದನ್ನು ಓದಿ : court Law rules : ಮಹಿಳೆ ಸ್ನಾನ ಮಾಡೋದನ್ನು ಇಣುಕಿ ನೋಡುವುದು ಅಪರಾಧ- ಹೈಕೋರ್ಟ್
I don’t think the title of your article matches the content lol. Just kidding, mainly because I had some doubts after reading the article.
I don’t think the title of your article matches the content lol. Just kidding, mainly because I had some doubts after reading the article.
Your point of view caught my eye and was very interesting. Thanks. I have a question for you.