BJP candidates : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ನಿರ್ಣಾಯಕ ಸಭೆ : ಯಾರಿಗೆ ಎಲ್ಲಿ ಟಿಕೆಟ್ ?

BJP candidates :ಹೊಸದಿಲ್ಲಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ( BJP candidates) ಅಂತಿಮಗೊಳಿಸುವ ನಿಟ್ಟಿನಲ್ಲಿ ಭಾನುವಾರ ನಿರ್ಣಾಯಕ ಸಭೆಗೆ ಕ್ಷಣಗಣನೆ ಆರಂಭವಾಗಿದೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರವೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ,ಬಿ.ಎಲ್.ಸಂತೋಷ್,ನಳಿನ್ ಕುಮಾರ್ ಕಟೀಲ್ ,ಸಿ.ಟಿ.ರವಿ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಅಭ್ಯರ್ಥಿಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.ಇದಕ್ಕಾಗಿಯೇ ಅಳೆದು ತೂಗಿ ಅಭ್ಯರ್ಥಿ ಆಯ್ಕೆಮಾಡಲಿದ್ದಾರೆ.

ವಿರೋಧವಿಲ್ಲದ ,ಕಾರ್ಯಕರ್ತರೊಂದಿಗೆ ಬೆರೆಯುವ ಅಭ್ಯರ್ಥಿಗೇ ಟಿಕೆಟ್ ನೀಡಲಿರುವ ಪಕ್ಷದ ವರಿಷ್ಠರು ಅದಕ್ಕಾಗಿ ಗುಪ್ತವರದಿಯನ್ನೂ ಪಡೆದುಕೊಂಡಿದ್ದಾರೆ.ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಸಿಗಲಿದೆ ಎಂಬುದು ಕುತೂಹಲ ಸೃಷ್ಟಿಸಿದೆ.ಈ ಬಾರಿ ಸಂಸದರಿಗೆ,ವಿಧಾನಪರಿಷತ್‌ನ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲು ಹೈಕಮಾಂಡ್ ಸಮ್ಮತಿಸಿಲ್ಲ ಎಂದು ತಿಳಿದು ಬಂದಿದೆ.

ಮೊದಲ ಪಟ್ಟಿಯಲ್ಲಿ ಕೆಲವು ಹೆಸರುಗಳನ್ನು ಹೊರತುಪಡಿಸಿ ಉಳಿದವುಗಳನ್ನು ಮಂಡಳಿಯ ಅನುಮೋದನೆ ಪಡೆದ ನಂತರ ಪ್ರಕಟಿಸಬಹುದು. ಭಾನುವಾರ ಸಂಜೆ 5 ಗಂಟೆಗೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.

ನಡ್ಡಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಮನ್ಸುಖ್ ಮಾಂಡವಿಯಾ ಹಾಗೂ ಪಕ್ಷದ ಹಿರಿಯ ನಾಯಕ ಅರುಣ್ ಸಿಂಗ್ ಅವರೂ ಉಪಸ್ಥಿತರಿದ್ದರು.

Leave A Reply

Your email address will not be published.