2nd PUC Result 2023: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ಮಹತ್ವದ ಮಾಹಿತಿ!
2ndPUC Result-2023 Karnataka Board: ರಾಜ್ಯದಲ್ಲಿ ಈಗಾಗಲೇ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (second puc exam 2023) ಮುಕ್ತಾಯವಾಗಿದೆ. ಪರೀಕ್ಷೆಯು ಮಾರ್ಚ್ 09,2023 ರಿಂದ ಆರಂಭವಾಗಿದ್ದು, ಮಾರ್ಚ್ 29,2023ಕ್ಕೆ ಕೊನೆಗೊಂಡಿದೆ. ಸದ್ಯ ವಿದ್ಯಾರ್ಥಿಗಳೇ ದ್ವಿತೀಯ ಪಿಯುಸಿ ಫಲಿತಾಂಶದ (2ndPUC Result-2023 Karnataka Board) ಕುರಿತು ಮಹತ್ವದ ಮಾಹಿತಿ ಇಲ್ಲಿದೆ.
2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಈಗಾಗಲೇ ಮುಕ್ತಾಯಗೊಂಡಿದ್ದು, ಏಪ್ರಿಲ್ 5 ರಿಂದ ಮೌಲ್ಯಮಾಪನ ಕಾರ್ಯವು ಆರಂಭವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫಲಿತಾಂಶವೂ ಪ್ರಕಟವಾಗಲಿದೆ, ಅದಕ್ಕಾಗಿ ತಯಾರಿಯೂ ನಡೆಯುತ್ತಿದೆ.
ಮೇ 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಈ ದಿನಾಂಕದೊಳಗೆ ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ನಿರ್ಧರಿಸಿದೆ ಎಂದು ಹೇಳಲಾಗಿದೆ. ಇನ್ನು ಫಲಿತಾಂಶ ಪ್ರಕಟವಾದರೆ, ರಿಸಲ್ಟ್ ಚೆಕ್ ಮಾಡೋದು ಹೇಗೆ? ಈ ಬಗ್ಗೆ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡೋದು ಹೇಗೆ?
• ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ವೆಬ್‌ಸೈಟ್ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಬೇಕು.
• ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ವಿದ್ಯಾರ್ಥಿಗಳೇ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ.
• ‘Submit’ ಅನ್ನು ಕ್ಲಿಕ್ ಮಾಡಿ.
• ನಿಮ್ಮ ಫಲಿತಾಂಶ ನಿಮಗೆ ಕಾಣಿಸುತ್ತದೆ.
• ರಿಸಲ್ಟ್ ಶೀಟ್ ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ.