Puttur : ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

Ashok kumar Rai : ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈ (Ashok kumar Rai)ಯವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಪುತ್ತೂರು ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈಯವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿತ್ತು.

ಇದೀಗ ಕೆಪಿಸಿಸಿ ಮತ್ತು ಸ್ತ್ರೀನಿಂಗ್ ಕಮಿಟಿ ಅಶೋಕ್ ಕುಮಾರ್ ರೈಯವರ ಹೆಸರನ್ನು ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.

ನಿನ್ನೆಯ ತನಕ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ನಡೆದ ದಿಡೀರ್ ಬದಲಾವಣೆಯಿಂದ ಪುತ್ತೂರು ಕ್ಷೇತ್ರದಲ್ಲಿ ಅಶೋಕ್ ಕುಮಾರ್ ರೈ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಹಿಂದೆ ಬಿಜೆಪಿಯಲ್ಲಿದ್ದು ತೀರಾ ಇತ್ತೀಚೆಗೆ ಬಿಜೆಪಿಯಲ್ಲಿ ಟಿಕೆಟ್ ಪಡೆಯಲು ಅಶೋಕ್ ಕುಮಾರ್ ರೈ ಅವರು ಪ್ರಯತ್ನಿಸಿದ್ದರು. ಆದರೆ ಬಿಜೆಪಿಯಲ್ಲಿ ಟಿಕೆಟ್ ದೊರೆಯುವ ಸಂಭವನೀಯತೆ ಕಡಿಮೆ ಎಂದು ಅನಿಸಿದ ನಂತರ ಅವರು ಕಾಂಗ್ರೆಸ್ ಸೇರಿದ್ದರು.

ಪ್ರತಿಷ್ಠಿತ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಇನ್ನು ಕೂಡಾ ಪ್ರಕಟಿಸಿಲ್ಲ. ಇಲ್ಲಿ ಬಿಜೆಪಿಯೂ ಇಂದು ಅಥವಾ ನಾಳೆಯ ಒಳಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಲಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರು ಬಿಜೆಪಿಯ ನೆಚ್ಚಿನ ಸ್ಪರ್ಧಿಯಾಗಿದ್ದು ಮತ್ತೊಂದು ಬಾರಿ ಅದೃಷ್ಟ ಪರೀಕ್ಷೆಗೆ ಎಲ್ಲಾ ತಯಾರಿ ನಡೆಸಿದ್ದಾರೆ. ಈ ಮಧ್ಯೆ ಇನ್ನೂ ಕೆಲವು ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಹೈಕಮಾಂಡ್ ಮತ್ತು ಸಂಘ ಮುನ್ನಲೆಗೆ ತಂದಿತ್ತು.

ಇದೀಗ ಬಿಜೆಪಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಎರಡು ಹೆಸರುಗಳು ಫೈನಲ್ ಫೈಟಿನಲ್ಲಿ ಇದ್ದು ಹಾಲಿ ಶಾಸಕ ಸಂಜೀವ ಮಠಂದೂರು ಮತ್ತು ಆಶಾ ತಿಮ್ಮಪ್ಪ ಗೌಡ ಎಂಬ ಮಹಿಳೆ – ಇವರಿಬ್ಬರಲ್ಲಿ ಒಬ್ಬರು ಬಿಜೆಪಿ ಅಭ್ಯರ್ಥಿಯಾಗುವುದು ಖಚಿತ.

 

 

.

Leave A Reply

Your email address will not be published.