Actress Leelavathi: ನಟಿ ಲೀಲಾವತಿ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು? ಇವರ ಆಸ್ತಿ ಮೌಲ್ಯ ತಿಳಿದರೆ ಖಂಡಿತಾ ಶಾಕ್ ಆಗ್ತೀರಾ!!
Actress Leelavathi: ಲೀಲಾವತಿ (Actress Leelavathi) ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದು, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ (kannada film industry) ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಲೀಲಾವತಿ ಅವರಿಗೆ 1999-2000ದ ಸಾಲಿನಲ್ಲಿ ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ (dr. Rajkumar) ಪ್ರಶಸ್ತಿಯನ್ನು ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯಿತು.
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.
ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.
ಲೀಲಾವತಿ ಅವರ ಮಗ ವಿನೋದ್ ರಾಜ್ (Vinod Raj) ಕೂಡ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ನಟಿಸಿ ಸೈ ಎನಿಸಿರುವ ನಟಿ ಲೀಲಾವತಿ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?
ಲೀಲಾವತಿ ಅವರು ಹಾಗೂ ವಿನೋದ್ ರಾಜ್ ಅವರ ಹೆಸರಿನಲ್ಲಿ ಬರೋಬ್ಬರಿ 40 ರಿಂದ 50 ಕೋಟಿ ರೂಪಾಯಿವರೆಗೆ ಆಸ್ತಿ ಇದೆ ಎಂದು ಮೂಲಗಳು ತಿಳಿಸಿವೆ. ಕೇವಲ ನೆಲಮಂಗಲದಲ್ಲಿ ಮಾತ್ರವಲ್ಲದೆ, ತಮಿಳುನಾಡಿನಲ್ಲಿ ಕೂಡ ಕೃಷಿ ಭೂಮಿಯನ್ನು ಇವರಿಬ್ಬರು ಹೊಂದಿದ್ದಾರೆ.
ಇದನ್ನೂ ಓದಿ: Karnataka Rain Report : ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಷ್ಣಾಂಶ ಏರಿಕೆ