Puttur-Sullia Election: ಪುತ್ತೂರು, ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಹಿನ್ನೆಲೆ ಏನು ? : ಮಹಿಳಾ ಮತದಾರರೇ ಹೆಚ್ಚಿರುವ ದ.ಕ.ದಲ್ಲಿ ಇಬ್ಬರು ಮಹಿಳಾ ಮಣಿಗಳಿಗೆ ಟಿಕೆಟ್

Puttur-Sullia BJP Candidates : ಮಂಗಳೂರು : ಮಹಿಳಾ ಮತದಾರರೇ ಹೆಚ್ಚಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 2 ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು (Puttur-Sullia BJP Candidates) ಮಹಿಳೆಯರಿಗೆ ಅವಕಾಶ ನೀಡಿದೆ.

ಪುತ್ತೂರು ಕ್ಷೇತ್ರದಿಂದ ಆಶಾ ತಿಮ್ಮಪ್ಪ ಗೌಡ ಹಾಗೂ ಸುಳ್ಯ ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಅವರಿಗೆ ಅವಕಾಶ ನೀಡಿದೆ.ಬಿಜೆಪಿ ಹಾಗೂ ರಾಷ್ಟ್ರೀಯ ಸೇವಿಕಾ ಸಮಿತಿಯಲ್ಲಿ ದುಡಿದ ಇಬ್ಬರಿಗೆ ಹೈಕಮಾಂಡ್ ಅವಕಾಶ ನೀಡಿದೆ.

ಪುತ್ತೂರಿನ ಹಾಲಿ ಶಾಸಕರಾದ ಸಂಜೀವ ಮಠಂದೂರು ಅವರ ವಿರುದ್ಧ ಹಿಂದೂ ಸಂಘಟನೆಗಳಿಗಿದ್ದ ಅಸಹನೆ ಹಾಗೂ ಕೊನೆಗಳಿಗೆಯ ಫೋಟೋ ವೈರಲ್ ಅವರ ಟಿಕೆಟ್ ಕೈತಪ್ಪುವಂತೆ ಮಾಡಿದೆ.ಸುಳ್ಯದಲ್ಲೂ ಎಸ್.ಅಂಗಾರ ಅವರಿಗೂ ಟಿಕೆಟ್ ಕೈ ತಪ್ಪಿದೆ. ಅಸಮಾಧಾನ ಹಾಗೂ ಈ ಹಿಂದೆ ಸಾಕಷ್ಟು ಅವಕಾಶ ಪಡೆದ ಕಾರಣ ಈ ಬಾರಿ ಟಿಕೆಟ್ ಕೈ ತಪ್ಪುವಂತೆ ಮಾಡಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಒಲಿದಿದೆ. ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕುಂತೂರು ಗ್ರಾಮದ ಆಶಾ ತಿಮ್ಮಪ್ಪ ಗೌಡ ಕುಂಡಡ್ಕ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಪದವು ನಿವಾಸಿ ತಿಮ್ಮಪ್ಪ ಗೌಡ ಅವರ ಪತ್ನಿ 65ರ ಹರೆಯದ ಆಶಾರವರು ಬಿಜೆಪಿ ಹಾಗೂ ರಾಷ್ಟ್ರೀಯ ಸೇವಿಕಾ ಸಮಿತಿಯ ಹಿರಿಯ ಕಾರ್ಯಕರ್ತೆ. ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಹೊಂದಿದ್ದಾರೆ. ಇವರು ನೆಲ್ಯಾಡಿ,ಗುತ್ತಿಗಾರು ಹಾಗೂ ಬೆಳ್ಳಾರೆಯಿಂದ ಜಿ. ಪಂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ವಿಶೇಷ ಎಂದರೇ ಇವರು ಕುಂತೂರು ಗ್ರಾಮದಿಂದ ಬಿಜೆಪಿಯಿಂದ ಎಂಎಲ್ ಎ ಚುನಾವಣೆ ಸ್ಪರ್ಧಿಸುತ್ತಿರುವ ಎರಡನೇ ಅಭ್ಯರ್ಥಿ. ಈ ಹಿಂದೆ ಶಕುಂತಳಾ ಟಿ ಶೆಟ್ಟಿ ಬಿಜೆಪಿಯಿಂದ ಬಂಟ್ವಾಳ ಹಾಗೂ ಪುತ್ತೂರಿನಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಭಾಗೀರಥಿ ಮುರುಳ್ಯ

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರು,ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶಾಂತಿನಗರ ಮುರುಳ್ಯದ ದಿ.ಗುರುವ ಮತ್ತು ದಿ.ಕೊರಗ್ಗು ದಂಪತಿಯ 5 ಮಕ್ಕಳಲ್ಲಿ ನಾಲ್ಕನೆಯವರಾದ
ಭಾಗೀರಥಿ ಮುರುಳ್ಯ ಅವರು 1-6-1974ರಲ್ಲಿ ಜನಿಸಿದರು. ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಪ್ರಸ್ತುತ ಹೈನುಗಾರಿಕೆ, ಟೈಲರಿಂಗ್ ವೃತ್ತಿ ನಿರ್ವಹಿಸುತ್ತಿದ್ದಾರೆ. ಗೌರವ ಶಿಕ್ಷಕಿಯಾಗಿಯೂ ದುಡಿದಿದ್ದಾರೆ. 25 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರೀಯರಾಗಿರುವ ಭಾಗೀರಥಿ
2000ದಿಂದ 2005ರವರಗೆ ಎಣ್ಮೂರು ಕ್ಷೇತ್ರದ ಸುಳ್ಯ ತಾಲೂಕು ಪಂಚಾಯತ್ ಸದಸ್ಯೆಯಾಗಿ, 2005 ರಿಂದ 2010ರವರೆಗೆ ಜಾಲ್ಸೂರು ಕ್ಷೇತ್ರದಿಂದ ದ.ಕ.ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದರು.
ಬಿಜೆಪಿ‌ ಮಂಡಲ‌ ಸಮಿತಿ ಉಪಾಧ್ಯಕ್ಷೆ, ಜಿಲ್ಲಾ ಬಿಜೆಪಿ‌ ಕಾರ್ಯದರ್ಶಿ, ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.2018ರ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.
ಪ್ರಸ್ತುತ ರಾಜ್ಯ ಬಿಜೆಪಿ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸದಸ್ಯೆಯಾಗಿ, ಕೊಡಗು ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಸಹಕಾರಿ ಸಂಘಗಳಲ್ಲಿ, ಧಾರ್ಮಿಕ ಕ್ಷೇತ್ರದಲ್ಲೂ, ಸಾಮಾಜಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಮುರುಳ್ಯ ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಮೂರನೇ ಬಾರಿ ಆಯ್ಕೆಯಾಗಿದ್ದಾರೆ. ಸುಳ್ಯ ಭೂ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. ಜಿಲ್ಲಾ ಜನತಾ ಬಜಾರ್ ನಿರ್ದೇಶಕರಾಗಿದ್ದಾರೆ. ತಾಲೂಕು ಸಹಕಾರಿ ಯೂನಿಯನ್ ಕೋಶಾಧಿಕಾರಿಯಾಗಿದ್ದಾರೆ. ಯುವತಿ ಮಂಡಲದ ಅಧ್ಯಕ್ಷೆಯಾಗಿದ್ದರು. ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷೆಯಾಗಿದ್ದರು.

Leave A Reply

Your email address will not be published.