Karnataka Rain Report : ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉಷ್ಣಾಂಶ ಏರಿಕೆ

Karnataka Rain Report : ಈಗಾಗಲೇ ಬಿಸಿಲ ಬೇಗೆ ತಡೆಯಲಾಗದೆ ಜನರು ಹಲವಾರು ಸಮಸ್ಯೆಗಳನ್ನು (problem) ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿರುವುದನ್ನು ಕಾಣಬಹುದು, ಬೆಳಿಗ್ಗೆ ಇದ್ದ ವಾತಾವರಣ ಸಂಜೆ ಹೊತ್ತಿಗೆ ಮಾಯವಾಗಿರುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಸದ್ಯ ಬಿಸಿಲ ಧಗೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ರಾಜ್ಯಕ್ಕೆ ಬೇಸಿಗೆ ಮಳೆ (Summer Rain) ಬೀಳಲಿದೆ ಎಂಬ ಮಾಹಿತಿ ಇದೆ. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು (Karnataka Rain Report), ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇರುವ ಸಾಧ್ಯತೆ ಇದೆ. ಕೆಐಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೆ, ಕಲಬುರ್ಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ಸಾಧ್ಯತೆ ಇದೆ.

ಇನ್ನು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಸದ್ಯ ಈ ಬಾರಿ 90ರಿಂದ ಶೇಕಡ 95ರಷ್ಟು ಮಳೆಯಾಗುವ ಸಾಧ್ಯತೆ ಇದೆ.

ಸ್ಕೈಮೆಟ್‌ ವೆದರ್‌ನ ಹವಾಮಾನ ವರದಿಯ ಪ್ರಕಾರ, ಜೂನ್‌ ತಿಂಗಳಲ್ಲಿ ಎಲ್‌ಪಿಎಯ ಶೇಕಡಾ 99ರಷ್ಟು ಮುಂಗಾರು ಮಳೆಯಾಗಲಿದೆ. ಜುಲೈನಲ್ಲಿ ಶೇಕಡ 92 ಮತ್ತು ಆಗಸ್ಟ್‌ನಲ್ಲಿ ಶೇಕಡ 92ರಷ್ಟು ಮಳೆಯಾಗಲಿದೆ. ಒಟ್ಟಿನಲ್ಲಿ ಈ ಬಾರಿ ವರ್ಷ ಪ್ರತಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಶೇಕಡ 90ರಿಂದ 95ರಷ್ಟಿದೆ. ಹೆಚ್ಚು ಮಳೆ ಸುರಿಯುವ ಸಾಧ್ಯತೆ ಶೇ. 0ರಷ್ಟಿದೆ. ಎಂದು ಸ್ಕೈಮೆಟ್‌ ವೆದರ್‌ನ ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ .

 

ಇದನ್ನು ಓದಿ : Election Nomination : ವಿಧಾನಸಭೆ ಚುನಾವಣೆ! ನಾಳೆಯೇ( ಎ.13) ನಾಮಪತ್ರ ಸಲ್ಲಿಕೆ ಆರಂಭ! 

Leave A Reply

Your email address will not be published.