CM Bommai: ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್‌ ರನ್‌; ಉಡುಪಿ ಭೇಟಿ ವೇಳೆ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ; ಕೆಲ ಕಾಲ ಆತಂಕ ಸೃಷ್ಟಿ

Basavaraj Bommai temple run : ಉಡುಪಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ.ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜಕೀಯ ನಾಯಕರು ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ಇತ್ತೀಚೆಗೆ ಬಿಜೆಪಿ ಅವರು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಿದ್ದಾರೆ. ಈ ಬೆನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟೆಂಪಲ್‌ ರನ್‌ (Basavaraj Bommai temple run) ಪ್ರಾರಂಭಿಸಿದ್ದಾರೆ. ಹೀಗಾಗಿ ಉಡುಪಿ ಭೇಟಿ ನೀಡುವುದಕ್ಕೆ ಬರುತ್ತಿದ್ದ ವೇಳೆ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ.

 

ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲ ಕ್ಷಣಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಸಿದ ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಆತಂಕ ಸೃಷ್ಟಿಯಾಗಿದ್ದು ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಸ್ವಲ್ಪದರಲ್ಲಿ ಪಾರು ಆಗಿದ್ದಾನೆ. ಸದ್ಯ ಈಗ ಸಿಎಂ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಆಕಸ್ಮಿಕ ಇಬ್ಬರ ಭೇಟಿ ಆಗಿದ್ದಾರೆ.

Leave A Reply

Your email address will not be published.