ರಾಜ್ಯದ ಪ್ರಾಥಮಿಕ ಹಾಗೂ ಪೌಢಶಾಲೆ ಶಿಕ್ಷಕರ ಅಜೀವ ಸದಸ್ಯತ್ವದ ಗುರುತಿನ ಚೀಟಿ ಆನ್ಲೈನ್ ಮೂಲಕ ಮಾಡಲು ಗಡುವು ನಿಗದಿ!

Share the Article

Primary-secondary school teacher: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ (teachers) ಮಹತ್ವದ ಮಾಹಿತಿ (BIGG NEWS) ಇಲ್ಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು (Primary-secondary school teacher) ಅಜೀವ ಸದಸ್ಯತ್ವದ ಗುರುತಿನ ಚೀಟಿಗಳನ್ನು ಆನ್ನೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದ್ದು, Online ನೋಂದಣಿ ಕಾರ್ಯವನ್ನು 13/10/2022 ರಿಂದ ಲೋಕಾರ್ಪಣೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಕಛೇರಿ ವತಿಯಿಂದ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಎಲ್ಲಾ ಸೌಲಭ್ಯಗಳನ್ನು Online ಸೇವೆಗೆ ಒಳಪಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಆಜೀವ ಸದಸ್ಯತ್ವದ ಗುರುತಿನ ಚೀಟಿಗಳನ್ನು ಆನ್ನೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಈ ಕುರಿತು ರಾಜ್ಯದ ಎಲ್ಲಾ ಪದವಿ ಪೂರ್ವ, ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ/ ಅನುದಾನಿತ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಕಾಲೇಜು ವಿಶ್ವವಿದ್ಯಾನಿಲಯಗಳು, ಎಲ್ಲ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಶಾಲಾ ಶಿಕ್ಷಕರು, ಉಪನ್ಯಾಸಕರನ್ನು ಕಡ್ಡಾಯವಾಗಿ ಅಜೀವ ಸದಸ್ಯತ್ವ Online ನೋಂದಣಿ ಪಡೆದುಕೊಳ್ಳಲು ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಅಥವಾ ಅನುದಾನಿತ ಶಾಲಾ ಶಿಕ್ಷಕರಿಗೆ, ಈಗಾಗಲೇ ನಿಧಿಯ ಸದಸ್ಯತ್ವ ಪಡೆದು ಆಜೀವ ಸದಸ್ಯತ್ವ ಕಾರ್ಡ್ ಪಡೆದಿದ್ದವರು ಶುಲ್ಕವಿಲ್ಲದೆ Online ನಲ್ಲಿ ನೋಂದಣಿ ಮಾಡಿಕೊಂಡು ಹೊಸ ನೋಂದಣಿ ಸಂಖ್ಯೆಯೊಂದಿಗೆ ಕಾರ್ಡ್ ಆನ್‌ಲೈನ್‌ನಲ್ಲಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಹಾಗೇ ಇದುವರೆಗೂ ಆಜೀವ ಸದಸ್ಯತ್ವ ಪಡೆಯದಿರುವ ಶಿಕ್ಷಕರಿಗೆ ಸದಸ್ಯತ್ವ ಪಡೆಯುವಂತೆ ಸೂಚಿಸಲಾಗಿದೆ. ಜೊತೆಗೆ ಸದಸ್ಯತ್ವ ಪಡೆಯದಿರುವ ಶಿಕ್ಷಕರಿಗೆ, ಉಪನ್ಯಾಸಕರಿಗೆ ಸದಸ್ಯತ್ವ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿ, ಹೆಚ್ಚಿನ ಆಜೀವ ಸದಸ್ಯತ್ವ ಪಡೆಯಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.

Leave A Reply