Karnataka Elections 2023 : ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಶುರು!

Karnataka Election Nomination Begins :  ವಿಧಾನಸಭೆ ಚುನಾವಣೆ 2023ರ ವೇಳಾಪಟ್ಟಿ(Karnataka Election Nomination Begins) ಪ್ರಕಾರ ಚುನಾವಣಾ ದಿನಾಂಕ ಘೋಷಿಸಲಾಗಿದೆ. ಅಂದ ಹಾಗೆ ಮೇ.10ರಂದು ಮತದಾನ ಹಾಗೂ ಮೇ.13 ರಂದು ಮತ ಎಣಿಕೆಯ ದಿನ ಗೊತ್ತು ಮಾಡಲಾಗಿದೆ. ಇಂದು ಚುನಾವಣಾ ಅಧಿಸೂಚನೆ ಹೊರಡಿಲಾಗುತ್ತಿದೆ. ದಿನಾಂಕ 13-04-2023 (ಇಂದು) ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ದಿನಾಂಕ 20 ಎಪ್ರಿಲ್‌ ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ. ಎಪ್ರಿಲ್‌ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನ ಇರುವುದರಿಂದ ಈ ದಿನಗಳಂದು ನಾಮಪತ್ರ ಸಲ್ಲಿಸಲು ಅವಕಾಶ ಇಲ್ಲ.

ಅಭ್ಯರ್ಥಿ ಸೇರಿದಂತೆ 5 ಜನರಿಗೆ ಮಾತ್ರ ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದೆ. 100ಮೀಟರ್‌ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಎಪ್ರಿಲ್‌ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಎ.24 ಮಧ್ಯಾಹ್ನ 3ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಚುನಾವಣೆಗೆ ಅಗತ್ಯವಿರುವ ಎಲ್ಲಾ ಅಧಿಕಾರಿಗಳು/ ಸಿಬ್ಬಂದಿಗಳನ್ನು ರಾಜ್ಯದಲ್ಲಿ ನಿಯೋಜನೆ ಮಾಡಲಾಗಿದೆ. 37ಪೊಲೀಸರು, 120 ಸಾಮಾನ್ಯ ವೀಕ್ಷಕರು, 146 ವೆಚ್ಚ ನಿರ್ವಹಣಾ ವೀಕ್ಷಕರನ್ನು ನಿಯೋಜನೆ ಮಾಡಲಾಗಿದೆ.

ಇಂದು ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದೆ. ಮತದಾನದ ಸಮಯ ಹಾಗೂ ಇತರ ಪ್ರಮುಖ ವಿಷಯಗಳನ್ನು ಅಧಿಸೂಚನೆಯಲ್ಲಿ ನೀಡಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave A Reply

Your email address will not be published.