Laxman Savadi Quits BJP: ಬಿಜೆಪಿಗೆ ಗುಡ್‌ಬೈ ಹೇಳಿ ‘ಕೈ’ ಹಿಡಿಯಲಿರುವ ಲಕ್ಷ್ಮಣ ಸವದಿ!!

Laxman Savadi Quits BJP: ಈಗಾಗಲೇ ಚುನಾವಣೆಯ (Election-2023) ಕಾವು ಎಲ್ಲೆಡೆ ಗರಿಗೆದರಿದ್ದು, ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲುವಿನ ಜಯಭೇರಿ ಸಾಧಿಸಲು ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಇದೀಗ
ಅಥಣಿ ವಿಧಾನಸಭಾ ಕ್ಷೇತ್ರದಿಂದ (Karnataka Assembly Election) ಟಿಕೆಟ್‌ ವಂಚಿತರಾಗಿರುವ ಮಾಜಿ ಸಚಿವ ಲಕ್ಷ್ಮಣ ಸವದಿ (Laxman Savadi Quits BJP) ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.

 

ಮಾಜಿ ಸಚಿವ ಲಕ್ಷ್ಮಣ ಸವದಿ, ಅಥಣಿ ವಿಧಾನಸಭಾ ಕ್ಷೇತ್ರದಿಂದ (Karnataka Assembly Election) ಟಿಕೆಟ್‌ ವಂಚಿತರಾಗಿ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ನಿಮಗೆ ಟಿಕೆಟ್ ಕೊಡ್ತಿವಿ ಎಂದು ಮಾತು ಕೊಟ್ಟಿದ್ರು. ಆದರೆ, ಬಿಜೆಪಿಯವರು ಕೊಟ್ಟ ಮಾತನ್ನು ತಪ್ಪಿದ್ರು. ಯಾರು ಕೂಡಾ ಈ ಬಗ್ಗೆ ಮಾತನಾಡಿಲ್ಲ. ನಾನು ಯಾವುದೇ ಡಿಮ್ಯಾಂಡ್ ಇಟ್ಟಿಲ್ಲ. ಪಕ್ಷ ತನಗೆ ಮೋಸ ಮಾಡಿದೆ. ಇದರಿಂದಾಗಿ ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದು, ಇದೀಗ ಪಕ್ಷದ ಎಲ್ಲಾ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ತೊರೆದ ಲಕ್ಷ್ಮಣ ಸವದಿ ಕೈ ಸೇರಲಿದ್ದಾರೆ. ಹೌದು, ಲಕ್ಷ್ಮಣ ಸವದಿ ಅವರು ಈಗಾಗಲೇ ಕಾಂಗ್ರೆಸ್‌ ನಾಯಕರ ಜೊತೆ ಸಂಪರ್ಕದಲ್ಲಿದ್ದು, ಇಂದು ಸಂಜೆ ಕಾಂಗ್ರೆಸ್‌ಗೆ ಸೇರಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡಿ ನಿರ್ಧಾರ ಕೈಗೊಂಡಿದ್ದಾರೆ. ಲಕ್ಷ್ಮಣ ಸವದಿ ಇಂದು ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಲಕ್ಷ್ಮಣ ಸವದಿ, ತಮ್ಮ ರಾಜೀನಾಮೆ ಪತ್ರವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ ಸವದಿ ಅವರು,“ ನಾನು ಕಾಂಗ್ರೆಸ್‌ನಿಂದ ನನ್ನ ಮಗನಿಗೆ ಟಿಕೆಟ್ ಕೇಳಿಲ್ಲ. ನನಗೆ ಪುತ್ರ ವ್ಯಾಮೋಹ ಇಲ್ಲ. ನಾನು ಅಥಣಿಯಿಂದ ಟಿಕೆಟ್ ಕೇಳಿದ್ದೇನೆ. ಅದಕ್ಕೆ ಒಪ್ಪಿಗೆಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಕ್ಷೇತ್ರದಲ್ಲಿ ಬಾಕಿಯಿರುವ ನೀರಾವರಿ ಯೋಜನೆ ಪೂರ್ಣಗೊಳಿಸಬೇಕು, ನನ್ನ ಶಕ್ತಿ ಮೀರಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಎಲ್ಲಾ ಜಿಲ್ಲೆಗಳಲ್ಲೂ ನನ್ನನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

ಇದನ್ನು ಓದಿ : Home decor from old bottles : ಬಾಟಲ್​ಗಳನ್ನು ಎಸೆಯಬೇಡಿ, ಇದರಿಂದ ಹೀಗೂ ಮಾಡ್ಬೋದು! ಮನೆ ಸೂಪರ್​ ಆಗಿರುತ್ತೆ 

Leave A Reply

Your email address will not be published.