Rahul Gandhi: ರಾಹುಲ್‌ ಗಾಂಧಿ ವಿರುದ್ಧ ದಾಖಲಾಯ್ತು ಮತ್ತೊಂದು ಮಾನನಷ್ಟ ಕೇಸ್‌! ಅಷ್ಟಕ್ಕೂ ರಾಗಾ ಮಾಡಿದ ತಪ್ಪೇನು?

Savarkar- Rahul Gandhi : ಇತ್ತೀಚೆಗೆ ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ(Rahul Gandhi) ಅವರ ಅದೃಷ್ಟವೇ ಏಕೋ ಸರಿ ಇಲ್ಲ ಎಂದು ಕಾಣುತ್ತದೆ. ಸಂಕಷ್ಟಗಳು ಬೆಂಬಿಡದಂತೆ ಕಾಡುತ್ತಿದ್ದು, ರಾಹುಲ್ ವಿರುದ್ಧ ಒಂದರ ನಂತರ ಒಂದು ಮಾನನಷ್ಟ ಮೊಕದ್ದಮೆಗಳು ದಾಖಲಾಗುತ್ತಿವೆ.

ಹೌದು, ಪ್ರಧಾನಿ ಮೋದಿಯವರ(PM Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಂಕಷ್ಟಕೊಳಗಾದ ಬೆನ್ನಲ್ಲೇ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಮೊಮ್ಮಗ ಈಗ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಈ ಹಿಂದೆ ರಾಹುಲ್‌ ಗಾಂಧಿ ಲಂಡನ್‌(UK)ಗೆ ತೆರಳಿದ್ದಾಗ ತಮ್ಮ ಭಾಷಣದಲ್ಲಿ ವಿ.ಡಿ ಸಾವರ್ಕರ್(V D Savarkar) ವಿರುದ್ಧ ತಪ್ಪು ( Savarkar- Rahul Gandhi) ಆರೋಪ ಮಾಡಿದ್ದಾರೆ ಎಂಬುದಾಗಿ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮೊಮ್ಮಗ ಸತ್ಯಕಿ ಸಾವರ್ಕರ್ (Satyaki Savarkar) ತಿಳಿಸಿದ್ದಾರೆ. ಸತ್ಯಕಿ ಪರ ವಕೀಲರು ಸಿಟಿ ಸಿವಿಲ್‌ ಕೋರ್ಟ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ (IPC) ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಂದಹಾಗೆ ಲಂಡನ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯವನ್ನು ಪ್ರಸ್ತಾಪಿಸಿದ್ದರು. “ತಾವು ಹಾಗೂ ತಮ್ಮ 5-6 ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು ಆಗ ತಮಗೆ ಸಂತೋಷವಾಗಿತ್ತು” ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದಿರುವುದಾಗಿ ತಿಳಿಸಿದ ರಾಹುಲ್ ಅವರು ಈ ಘಟನೆಯನ್ನು ಉಲ್ಲೇಖಿಸಿ ಇದು ಹೇಡಿತನವಲ್ಲವೇ ಎಂದು ಪ್ರಶ್ನಿಸಿದ್ದರು.

ಸದ್ಯ ರಾಹುಲ್ ಗಾಂಧಿ ಉಲ್ಲೇಖಿಸಿದ್ದ ಈ ಪ್ರಕರಣ ಕಲ್ಪಿತವಾದದ್ದು ಸಾವರ್ಕರ್ ಜೀವನದಲ್ಲಿ ಇಂಥಹ ಘಟನೆ ನಡೆದಿರಲಿಲ್ಲ. ಸಾವರ್ಕರ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರಾಗಿದ್ದರು. ಮುಸ್ಲಿಮರಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳುವಂತೆ ಸಾವರ್ಕರ್ ಸಲಹೆ ನೀಡುತ್ತಿದ್ದರು ಎಂದು ಸತ್ಯಕಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸತ್ಯಕಿ ಅವರು ಕೋರ್ಟ್‌ ಅಧಿಕಾರಿ ಇಂದು ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ ಇನ್ನೂ ಕೇಸ್ ಸಂಖ್ಯೆ ಸಿಕ್ಕಿಲ್ಲ ಎಂದು ಸತ್ಯಕಿ ಹೇಳಿದ್ದಾರೆ.

Leave A Reply

Your email address will not be published.