Actor Chethan Ahimsa : ನಟ ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಸರಕಾರ!!!

Share the Article

Actor Chethan Ahimsa: ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ (Actor Chethan Ahimsa) ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ತಮ್ಮ ಹಲವು ವಿವಾದಾತ್ಮಕ ಹೇಳಿಕೆಯಿಂದ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹಲವು ಚರ್ಚೆಗಳಿಗೂ ನಟ ಕಾರಣರಾಗಿದ್ದಾರೆ. ಇದೀಗ ನಟ ಚೇತನ್ ಅಹಿಂಸಾ ವೀಸಾವನ್ನು ಕೇಂದ್ರ ಸರಕಾರ ರದ್ದು ಮಾಡಿದೆ.

ಹೌದು, ನಟ ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್‌ ಜಾರಿ ಮಾಡಿದೆ.

ನಟ ಸಾಗರೋತ್ತರ ಭಾರತೀಯ ನಾಗರೀಕ (ಓಸಿಐ) ವೀಸಾ ಹೊಂದಿದ್ದಾರೆ. ಚೇತನ್ ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದು, ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚನೆ ನೀಡಲಾಗಿದೆ.

Leave A Reply