Karnataka 2nd PUC Result 2023: ವಿದ್ಯಾರ್ಥಿಗಳೇ ಗಮನಿಸಿ, ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!!
Karnataka 2nd-PUC Result 2023: ರಾಜ್ಯದಲ್ಲಿ ಈಗಾಗಲೇ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (second puc exam 2023) ಮುಕ್ತಾಯವಾಗಿದೆ. ಪರೀಕ್ಷೆಯು ಮಾರ್ಚ್ 09,2023 ರಿಂದ ಆರಂಭವಾಗಿದ್ದು, ಮಾರ್ಚ್ 29,2023ಕ್ಕೆ ಕೊನೆಗೊಂಡಿದೆ. ಏಪ್ರಿಲ್ 5 ರಿಂದ ಮೌಲ್ಯಮಾಪನ ಕಾರ್ಯವೂ ಆರಂಭವಾಗಿದೆ. ಸದ್ಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರುನೋಡುತ್ತಿದ್ದಾರೆ. ವಿದ್ಯಾರ್ಥಿಗಳೇ ದ್ವಿತೀಯ ಪಿಯುಸಿ ಫಲಿತಾಂಶದ (Karnataka 2nd-PUC Result 2023) ಕುರಿತು ಮಹತ್ವದ ಮಾಹಿತಿ ಇಲ್ಲಿದೆ.
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಶೇಕಡ 50 ರಷ್ಟು ಪೂರ್ಣಗೊಂಡಿದೆ ಎಂದು ಹೇಳಲಾಗಿದ್ದು, ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ ನ ಮೂರು ಅಥವಾ ನಾಲ್ಕನೇ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಮೂಲಗಳು ತಿಳಿಸಿವೆ.
ಕಲಾ ವಿಷಯ ಮತ್ತು ಕಡಿಮೆ ವಿದ್ಯಾರ್ಥಿಗಳು ಇರುವ ವಿಷಯಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಮೌಲ್ಯಮಾಪನ ಪ್ರಗತಿಯಲ್ಲಿದೆ. ಮುಂದಿನ ಒಂದು ವಾರದಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ನಂತರ ಫಲಿತಾಂಶ ಪ್ರಕಟಿಸುವ ಸಂಬಂಧ ತಾಂತ್ರಿಕ ಕೆಲಸಗಳಿಗೆ ಏಳು-ಎಂಟು ದಿನಗಳ ಸಮಯ ಬೇಕಾಗುತ್ತದೆ. ಎಲ್ಲ ಕಾರ್ಯಗಳನ್ನು
ಮುಕ್ತಾಯದ ನಂತರ ಈ ತಿಂಗಳ ಅಂತ್ಯದಲ್ಲಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡೋದು ಹೇಗೆ?
• ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ವೆಬ್‌ಸೈಟ್ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಬೇಕು.
• ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ವಿದ್ಯಾರ್ಥಿಗಳು ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ.
• ‘Submit’ ಅನ್ನು ಕ್ಲಿಕ್ ಮಾಡಿ.
• ನಿಮ್ಮ ಫಲಿತಾಂಶ ನಿಮಗೆ ಕಾಣಿಸುತ್ತದೆ.
• ರಿಸಲ್ಟ್ ಶೀಟ್ ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ.