ಪುತ್ತೂರು : ಎ.17ರಂದು ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ

Arun Puthila : ಪುತ್ತೂರು : ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಅರುಣ್ ಕುಮಾರ್ ಪುತ್ತಿಲ (Arun Puthila) ಅವರು ಎ.17ರಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಕುರಿತು ಅರುಣ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

 

ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.

ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲ ರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲ ರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

2018ರಲ್ಲೂ ಅರುಣ್ ಕುಮಾರ್ ಪುತ್ತಿಲ ಅವರು ಆಕಾಂಕ್ಷಿಯಾಗಿದ್ದರು.ಅಂದು ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡಲಾಗಿತ್ತು.ಅರುಣ್ ಕುಮಾರ್ ಮುನಿಸಿಕೊಂಡಿದ್ದರು.

ಬಳಿಕ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಮುಖಂಡರು, ಸ್ವಾಮೀಜಿಗಳ ಸಮ್ಮುಖದಲ್ಲಿ ಪಕ್ಷದಲ್ಲಿ ಅವಕಾಶ ನೀಡುವ ಕುರಿತು ಮಾತುಕತೆ ನಡೆಸಲಾಗಿತ್ತು.ಅರುಣ್ ಕುಮಾರ್ ಅವರು ಸಂಜೀವ ಮಠಂದೂರು ಅವರ ಪರವಾಗಿ ಪ್ರಚಾರ ಮಾಡಿದ್ದರು.ಸಂಜೀವ ಮಠಂದೂರು ಗೆದ್ದು ಶಾಸಕರಾದರು.

ಅರುಣ್ ಕುಮಾರ್ ಅವರಿಗೆ ನೀಡಿದ ಭರವಸೆಯನ್ನು 5 ವರ್ಷವಾದರೂ ಈಡೇರಿಸಲಾಗಿಲ್ಲ.ಈ ಬಾರಿ ಸಂಜೀವ ಮಠಂದೂರು ಅವರಿಗೂ ಟಿಕೆಟ್ ಕೈ ತಪ್ಪಿ ಆಶಾ ತಿಮ್ಮಪ್ಪ ಅವರಿಗೆ ಸಿಕ್ಕಿದೆ.

ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಸಭೆ ಸೇರಿ ಪಕ್ಷೇತರ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು.

Leave A Reply

Your email address will not be published.