Home Karnataka State Politics Updates Karnataka Election: ಬೀದರ್ : ಮೂರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆ!!

Karnataka Election: ಬೀದರ್ : ಮೂರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆ!!

Karnataka Election

Hindu neighbor gifts plot of land

Hindu neighbour gifts land to Muslim journalist

Bidar-submission of nomination paper: ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಯ (Karnataka Election) ಅಧಿಕೃತ ಪ್ರಕ್ರಿಯೆ ಶುರುವಾಗಿದೆ. ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ 13-04-2023 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಸಲು ದಿನಾಂಕ 20 ಎಪ್ರಿಲ್‌ ರವರೆಗೆ ಅವಕಾಶವಿರಲಿದೆ ಎನ್ನಲಾಗಿದೆ.

ಚುನಾವಣೆ ಹಿನ್ನೆಲೆ, ಬೀದರ್‌ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆ ಬಯಸಿ ಶನಿವಾರ ಒಟ್ಟು ನಾಲ್ಕು ನಾಮಪತ್ರಗಳು (candidate affidavit) ಸಲ್ಲಿಕೆಯಾಗಿವೆ ( Bidar-submission of nomination paper) ಎಂದು ತಿಳಿದುಬಂದಿದೆ.

ಬೀದರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್, ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶರಣಬಸಪ್ಪ ಬಾಬು, ಬೀದರ್ ದಕ್ಷಿಣ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ತುಕಾರಾಮ ಶರಣಪ್ಪ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಹಣಮಂತ ಮಟ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಹುಮನಾಬಾದ್, ಭಾಲ್ಕಿ ಹಾಗೂ ಔರಾದ್‌ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆ ತಿಳಿಸಿದೆ.