Central Bank of India Recruitment 2023 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಏಪ್ರಿಲ್ 21 ರವರೆಗೆ ವಿಸ್ತರಣೆ
Central Bank of India Recruitment : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶವಿದ್ದು (Central Bank of India Recruitment), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಏಪ್ರಿಲ್ 3, 2023 ಅರ್ಜಿ ಹಾಕಲು ಕೊನೆಯ ದಿನವಾಗಿತ್ತು. ಇದೀಗ ಏಪ್ರಿಲ್ 21 ರವರೆಗೆ ವಿಸ್ತರಿಸಲಾಗಿದೆ.
ಖಾಲಿ ಇವೆ. ಅಂತೆಯೇ ಬೇರೆ ಬೇರೆ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ : ಅಪ್ರೆಂಟಿಸ್
ಒಟ್ಟು ಹುದ್ದೆ : 5000(ಕರ್ನಾಟಕದಲ್ಲಿ 115 ಹುದ್ದೆಗಳು)
ವಿದ್ಯಾರ್ಹತೆ : ಪದವಿ
ವೇತನ ಮಾಸಿಕ : ₹ 10,000- 15,000
ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮಾರ್ಚ್ 31, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ ಪಾವತಿಸುವ ಬಗೆ- ಆನ್ಲೈನ್
ಅರ್ಜಿ ಶುಲ್ಕ:
PWBD ಅಭ್ಯರ್ಥಿಗಳು- 400 ರೂ.
SC/ST/ ಮಹಿಳಾ ಅಭ್ಯರ್ಥಿಗಳು- 600 ರೂ.
ಉಳಿದ ಅಭ್ಯರ್ಥಿಗಳು- 800 ರೂ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಲಿಖಿತ ಪರೀಕ್ಷೆ
ಸ್ಥಳೀಯ ಭಾಷೆಯ ಪುರಾವೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 19, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 21, 2023.
ಅಧಿಕೃತ ವೆಬ್ ಸೈಟ್ : centralbankofindia.co.in.