Uttar Pradesh: ಅತೀಕ್ ಅಹ್ಮದ್ ಮತ್ತು ಸಹೋದರನ ಹತ್ಯೆ : 16 ಪೊಲೀಸರ ಸಸ್ಪೆಂಡ್, ಕ್ಷಿಪ್ರ ತನಿಖಾ ಆಯೋಗ ರಚಿಸಿದ ಯೋಗಿ ಸರ್ಕಾರ!!

CM Yogi Adityanath : ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್ ನಗರದಲ್ಲಿ ಏಪ್ರಿಲ್ 15 ರಂದು (ನಿನ್ನೆ) ಸಂಜೆ ಆಘಾತಕಾರಿ ಘಟನೆಯೊಂದು ನಡೆದಿದೆ. ಮಾಫಿಯಾ ದೊರೆ, ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ (Atique Ahmed) ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ (Ashraf Ahmed) ನನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗಲೇ ಮೂವರು ದುಷ್ಕರ್ಮಿಗಳು ಸಹೋದರರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಸದ್ಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಯುಪಿ ಸಿಎಂ ಯೋಗಿ (CM Yogi Adityanath), ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಲು ಸೂಚಿಸಿದ್ದಾರೆ.

ಉಮೇಶ್ ಪಾಲ್ ಹತ್ಯೆ ಪ್ರಕರಣದ ‍(Umesh pal murder case) ಪ್ರಮುಖ ಆರೋಪಿಯಾಗಿದ್ದ ಹಾಗೂ ಸಮಾಜವಾದಿ ಪಕ್ಷದ ರಾಜಕಾರಣಿ ಅತೀಕ್ ಅಹ್ಮದ್ ಪುತ್ರ ಅಸಾದ್ ಅಹ್ಮದ್‌ನನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ಎನ್‌ಕೌಂಟರ್‌ನಲ್ಲಿ (Uttar Pradesh Encounter) ಹೊಡೆದುರುಳಿಸಿದ್ದರು. ಇದೀಗ ನಿನ್ನೆ ಸಂಜೆ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದು, ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತೀಕ್ ಅಹಮ್ಮದ್ ನು 2005 ರಲ್ಲಿ ನಡೆದ ಬಿಎಸ್ಪಿ ಶಾಸಕ ರಾಜು ಪಾಲ್ ಹತ್ಯಾ ಪ್ರಕರಣದಲ್ಲಿ ಆರೋಪಿಯಾಗಿ ಶಿಕ್ಷೆ ಅನುಭವಿಸುತ್ತಿದ್ದ. ಇತ್ತೀಚೆಗೆ ರಾಜು ಪಾಲ್ ಹತ್ಯಾ ಪ್ರಕರಣದ ಪ್ರಮುಖ ಸಾಕ್ಷಿಯಾದ ಉಮೇಶ್ ಪಾಲ್ ನನ್ನು ಅತೀಕ್ ಮತ್ತವನ ಮಕ್ಕಳು ಮತ್ತು ತಂಡ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆಯ ಸುದ್ದಿ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸೌಧದಲ್ಲಿ ಅಬ್ಬರಿಸಿದ್ದರು. ಮಣ್ಣಿನಲ್ಲಿ ಹೂತು ಹಾಕುತ್ತೇನೆ ಎಂದು ತುಂಬಿದ ವಿಧಾನಸಭೆಯಲ್ಲಿ ಘರ್ಜಿಸಿದ್ದರು. ಇದೀಗ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಜಿಡಿಪಿ ಆರ್‌ಕೆ ವಿಶ್ವಕರ್ಮ ಅವರು ಘಟನೆಯ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದು, ಸಿಎಂ ಯೋಗಿ, ತಕ್ಷಣವೇ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸೇರಿದಂತೆ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ್ದು, ಪ್ರಕರಣದ ತನಿಖೆಗೆ ಮೂವರು ಸದಸ್ಯರ ನ್ಯಾಯಾಂಗ ಆಯೋಗ (ನ್ಯಾಯಾಂಗ ವಿಚಾರಣಾ ಆಯೋಗ) ರಚಿಸುವಂತೆ ಸೂಚನೆ ನೀಡಿದ್ದಾರೆ.

ಹಾಗೆಯೇ ಘಟನೆಗೆ ಸಂಬಂಧಿಸಿದಂತೆ 17 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಪ್ರಯಾಗ್‌ರಾಜ್‌ನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Karnataka Election: ಬೀದರ್ : ಮೂರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆ!!

Leave A Reply

Your email address will not be published.