Jagadish Shettar :ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ BIG BIG ಆಫರ್ !

Jagadish Shettar : ಬಿಜೆಪಿ (BJP) ಪಾಳಯದಲ್ಲಿ ಎಲ್ಲರ ನಿರೀಕ್ಷೆ ತಲೆ ಕೆಳಗಾಗುವ ಹಾಗೆ ಈ ಬಾರಿ ಹಳೆಯ ಮುತ್ಸದ್ದಿ ನಾಯಕರನ್ನು ಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡಿರುವುದು ಕಂಡುಬಂದಿದೆ. ಹೀಗಾಗಿ, ಟಿಕೇಟ್ ವಂಚಿತರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ. ಸದ್ಯ, ಬಿಜೆಪಿಗೆ ಗುಡ್‌ಬೈ ಹೇಳಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar ) ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುವ ಸಾಧ್ಯತೆಯಿದ್ದು, ಅದರಲ್ಲಿಯೂ ಕಾಂಗ್ರೆಸ್‌ನಿಂದ (Congress) ಸ್ಪರ್ಧೆ ಮಾಡಲಿದ್ದಾರಾ ಎಂಬ ಅನುಮಾನ ದಟ್ಟವಾಗಿ ಕಾಡುತ್ತಿದೆ. ಇದಲ್ಲದೆ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.

 

ಹೌದು, ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿ ಹೊರ ನಡೆದಿರುವ ಬಂಡಾಯ ಸಾರಿದ ಶೆಟ್ಟರ್‌ ಅವರನ್ನು ತಮ್ಮ ಪಕ್ಷದತ್ತ ಸೆಳೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ ಕಾಂಗ್ರೆಸ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಯೋಜನೆ ಹಾಕಿಕೊಂಡಿದೆ. ತನ್ನ ಕಾರ್ಯ ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಬರಲು ಮಾತುಕತೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸದ್ಯ, ಕಾಂಗ್ರೆಸ್‌ ಮೂರು ಪಟ್ಟಿಯನ್ನು ರಿಲೀಸ್‌ ಮಾಡಿದರೂ ಕೂಡ ಶೆಟ್ಟರ್‌ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಗುಟ್ಟು ಕಾಯ್ದುಕೊಂಡಿದೆ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿರುವ ಸಾಧ್ಯತೆ ಹೆಚ್ಚಿದೆ. ಇದಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್‌ ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್‌ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ಶೆಟ್ಟರ್‌ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಕನ್ನಡದ ಹಳಿಯಾಳದಲ್ಲಿ ಸಿದ್ದರಾಮಯ್ಯ ಅವರು ಶೆಟ್ಟರ್‌ ಪಕ್ಷಕ್ಕೆ ಬಂದರೆ ನಾವು ಸ್ವಾಗತ ಕೋರುತ್ತೇವೆ. ಆದರೆ ಶೆಟ್ಟರ್ ಕಾಂಗ್ರೆಸ್ ಸೇರುವ ಕುರಿತಾಗಿ ಯಾವುದೇ ಮಾತುಕತೆ ನಡೆಸಿಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ, ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನೀಡದೆ ಇರುವುದು ಸರಿಯಲ್ಲ. ಪಕ್ಷ ಕಟ್ಟಿದವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ (Siddaramaiah)ಅವರು ದೂರಿದ್ದಾರೆ.

ಕಾಂಗ್ರೆಸ್‌ ಮೂರು ಪಟ್ಟಿಯನ್ನು ರಿಲೀಸ್‌ ಮಾಡಿದರೂ ಶೆಟ್ಟರ್‌ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್‌ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Lakshmana Savadi ಗೆ ಕಾಂಗ್ರೆಸ್’ನಲ್ಲಿ ಯಾವ ಸ್ಥಿತಿ ಬರುತ್ತೆ ಅಂತ ಕಾದು ನೋಡಿ – ನಳಿನ್ ಕುಮಾರ್ ಕಟೀಲ್

Leave A Reply

Your email address will not be published.