Rahul Gandhi: ಅದಾನಿ ವಿರುದ್ದ ರಾಹುಲ್ ಆರೋಪ! ಮೋದಿ ವಿರುದ್ಧ ವಾಗ್ದಾಳಿ!
Rahul Gandhi: ಮೇ 10 ರಂದು ವಿಧಾನಸಭೆ ಚುನಾವಣೆ(Karnataka Election) ನಡೆಯಲಿರುವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ರಾಹುಲ್ ಗಾಂಧಿ (Rahul Gandhi)ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಾನಿ ‘ಭ್ರಷ್ಟಾಚಾರ’ (Corruption)ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದ್ದು ಮಾತ್ರವಲ್ಲ ಆ ಬಳಿಕ ರಾಹುಲ್ ಅವರನ್ನು ಲೋಸಕಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಎದುರಿಸಲಿದೆ. ಕಾಂಗ್ರೆಸ್ ಪಕ್ಷವು(Congress Party) ಸರ್ಕಾರ ರಚಿಸಿದ ಬಳಿಕ ಮೊದಲ ಸಚಿವ ಸಂಪುಟ ಸಭೆಯಲ್ಲಿ ತನ್ನ ಪ್ರಮುಖ ಚುನಾವಣಾ ಭರವಸೆಗಳನ್ನು ಅಂಗೀಕರಿಸುವ ಜೊತೆಗೆ ಅವುಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡಲಿದೆ. ಕೋಲಾರದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ( PM Modi)ಹಾಗೂ ಅದಾನಿ ವಿರುದ್ಧ ವಾಗ್ದಾಳಿ ಮಾಡಿದ್ದು, ಇದೆ ವೇಳೆ, ಕಾಂಗ್ರೆಸ್ ನೀಡಿರುವ ಎಲ್ಲ ಭರವಸೆಯನ್ನು ಈಡೇರಿಸುವುದಾಗಿ ಹೇಳಿದ್ದಾರೆ. ‘ಜೈ ಭಾರತ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಅವರು, ಅದಾನಿ ಭ್ರಷ್ಟಾಚಾರದ ಸಂಕೇತ ಎಂದು ಆರೋಪಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅದಾನಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ರಾಹುಲ್ ಗಾಂಧಿ “ಕೇವಲ ಒಬ್ಬ ಮನುಷ್ಯನ ಕೈನಲ್ಲಿದ್ದು, ಅದಾನಿ ಕೈನಲ್ಲಿ ಸಾವಿರಾರು ಕೋಟಿ ರೂಪಾಯಿ ಅವರ ಅಕೌಂಟ್ ಗೆ ಬರಲಿದೆ. ಅದಾನಿ ಅವರ ಕಂಪನಿಗಳಲ್ಲಿ ಚೈನಾದ ಡೈರೆಕ್ಟರ್ ಬಂದು ಆಸೀನರಾಗಿದ್ದಾನೆ. ಯಾಕೆ ಅಲ್ಲಿ ಸ್ಥಾನ ನೀಡಿದ್ದೀರಾ ಎಂಬುದಕ್ಕೆ ಉತ್ತರವಿಲ್ಲ. ಈ ವಿಚಾರ ಬಂದ ಸಂದರ್ಭ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡಿ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡುತ್ತಿದೆ ಎಂಬುದೇ ಖುಷಿಯ ವಿಚಾರ. ಪೂರ್ಣ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸಿ ಎಂದು ಇದೇ ವೇಳೆ ಕೇಳಿಕೊಂಡಿದ್ದಾರೆ.