Jagadish shettar: ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್
Ex-CM Jagadish shettar : ಕಾಂಗ್ರೆಸ್ ಸೇರ್ಪಡೆಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ನೀಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ (Ex-CM Jagadish shettar ). ಶೆಟ್ಟರ್ ಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು. ತಕ್ಷಣ ಜಗದೀಶ್ ಶೆಟ್ಟರ್ ಅವರಿಗೆ ಬೀ. ಫಾರಂ ನೀಡಲಾಗಿದೆ.
ಈ ಸಂದರ್ಭ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಜೊತೆ ಹಲವು ನಾಯಕರು ಬರುತ್ತಿದ್ದಾರೆ. ಅವರೆಲ್ಲ ನಮ್ಮ ಪಕ್ಷದ ರೀತಿ ನೀತಿ ಒಪ್ಪಿಕೊಂಡು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಶಕ್ತಿ ಬರಲಿದೆ. ಅವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದಾರೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
#WATCH | Former Karnataka CM Jagadish Shettar joins Congress, in the presence of party president Mallikarjun Kharge, KPCC president DK Shivakumar & Congress leaders Randeep Surjewala, Siddaramaiah at the party office in Bengaluru.
Jagadish Shettar resigned from BJP yesterday. pic.twitter.com/vxqVuKKPs1
— ANI (@ANI) April 17, 2023
ಶೆಟ್ಟರ್ ಅವರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿ ಸಭಾಧ್ಯಕ್ಷ ವಿಶ್ವೇಶ್ವರ್ ಕಾಗೇರಿ ಅವರಿಗೆ ಖುದ್ದಾಗಿ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತದನಂತರ ಅವರು ಸಂಜೆ ಬೆಂಗಳೂರಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಅವರ ಬೀಗರಾದ ಗಣೇಶ್ ಶಾಮನೂರು ಅವರ ನಿವಾಸಕ್ಕೆ ತೆರಳಿದ್ದರು. ಅಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗುವ ತನ್ನ ಅಂತಿಮ ನಿರ್ಧಾರ ಮಾಡಿದ್ದರು. ಅದರಂತೆ ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದಾರೆ.