MTB Nagaraj: ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ: ಎಂಟಿಬಿ ಆಸ್ತಿ ಎಷ್ಟು ಹೆಚ್ಚಳ ಗೊತ್ತಾ? ಇಲ್ಲಿದೆ ಓದಿ.

MTB Nagaraj : ಮುಂದಿನ ವಿಧಾನ ಸಭೆ ಚುನಾವಣೆ ರಾಜ್ಯದೆಲ್ಲೆಡೆ ರಣತಂತ್ರ ರೂಪಿಸಲಾಗುತ್ತಿದೆ. ಇದೀಗ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ (MTB Nagaraj) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.

 

ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದರು. ನಾಲ್ಕು ವರ್ಷದಲ್ಲಿ 495 ಕೋಟಿ ರೂ ಆಸ್ತಿ ಹೆಚ್ಚಳವಾಗಿದೆ.

ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕವಾಗಿದೆ.

Leave A Reply

Your email address will not be published.