Award Ceremony: ಮಹಾರಾಷ್ಟ್ರಪ್ರಶಸ್ತಿ ಸಮಾರಂಭದ ಬಿಸಿಲಿನ ಝಳಕ್ಕೆ ಬಲಿಯಾದವರ ಸಂಖ್ಯೆ 13 ಕ್ಕೆ ಏರಿಕೆ

Maharashtra Bhushan Award Ceremony : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ಭಾನುವಾರ ನಡೆದ ‘ಮಹಾರಾಷ್ಟ್ರ ಭೂಷಣ’ (Maharashtra Bhushan Award Ceremony ) ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಆಲ್ಲಿ 50ಕ್ಕೂ ಹೆಚ್ಚು ಜನ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿಲಿಗೆ ನೂರಾರು ಜನ ತೀವ್ರ ಅಸ್ವಸ್ಥರಾಗಿದ್ದು, ಖಾರ್ಘರ್ ಮತ್ತು ಸುತ್ತಮುತ್ತಲಿನ ಐದು ಆಸ್ಪತ್ರೆಗಳಲ್ಲಿ 44 ಜನರನ್ನು ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾದ ಈ ಮೆಗಾ ಕಾರ್ಯಕ್ರಮದಲ್ಲಿ ನಿನ್ನೆ 120 ಕ್ಕೂ ಹೆಚ್ಚು ಜನ ಬಿಸಿಲಿನ ಝಳದಿಂದ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಅಸ್ವಸ್ಥರಾದರು. ಇವರಲ್ಲಿ 15 ಕ್ಕೂ ಹೆಚ್ಚು ಜನರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಅಲ್ಲಿನ 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅಪ್ಪಾಸಾಹೇಬ್ ಧರ್ಮಾಧಿಕಾರಿಯ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರ ಸರ್ಕಾರ ನೀಡುವ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧರ್ಮಾಧಿಕಾರಿಗೆ ಪ್ರದಾನ ಮಾಡಿದ್ದರು. ಅಲ್ಲಿ ಕಾರ್ಯಕ್ರಮ ನಡೆದಾಗ ಅಲ್ಲಿನ ಉಷ್ಣತೆ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಹೀಟ್ ವೇವ್ ನಿಂದಾಗಿ ಹಲವರು ಅಸ್ವಸ್ಥಗೊಂಡಿದ್ದರು.

 

ಇದನ್ನು ಓದಿ : Umesh Pal murder : ಉಮೇಶ್ ಪಾಲ್ ಹತ್ಯೆಯಲ್ಲಿ ಉಳಿದಿರುವ ಏಕೈಕ ಆರೋಪಿ ಗುಡ್ಡು ಮುಸ್ಲಿಂ ಕರ್ನಾಟಕದಲ್ಲಿ, ಯಾವುದೇ ಕ್ಷಣದಲ್ಲಿ ಎನ್ಕೌಂಟರ್ ಸಾಧ್ಯತೆ ! 

Leave A Reply

Your email address will not be published.