School Vacation: ಮುಂಬರುವ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಕಡಿತ ; ಎಷ್ಟಿರಲಿದೆ ಕಲಿಕಾ ದಿನಗಳು?

school vacation : ಮುಂದಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ (school days) ಭಾರೀ ಕಡಿತವಾಗಿದೆ. ಹೌದು, 2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು. ಆದರೆ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು 244 ದಿನ ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಲಾಗಿದೆ. ಈ ಮೂಲಕ ಈ ವರ್ಷ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ 26 ರಜಾ ದಿನಗಳು (school vacation) ಸಿಗಲಿದೆ. ಹಿಂದಿನ ವರ್ಷದ ಶೇ. 74ರಷ್ಟು ದಿನ ಶಿಕ್ಷಣ ಸಂಬಂಧಿ ಚಟುವಟಿಕೆ ನಡೆದಿದ್ದು, ಈ ವರ್ಷ ಶೇ. 67ರಷ್ಟು ದಿನ ನಡೆಯಲಿದೆ.

 

ಕಲಿಕಾ ದಿನಗಳಲ್ಲಿಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗಣನೀಯವಾಗಿ, 48 ದಿನಗಳಷ್ಟು ಇಳಿಕೆ ಕಂಡು ಬಂದಿದೆ. ಕಳೆದ ಬಾರಿ ಕೊರೊನಾದಿಂದ ಶೈಕ್ಷಣಿಕ ಪ್ರಗತಿಯನ್ನು ಸರಿದೂಗಿಸಲು ಮೇ ತಿಂಗಳಲ್ಲಿ 14 ದಿನ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯುವುದಿಲ್ಲ.
ಮತ್ತು ಈ ವರ್ಷ ದಸರಾ ರಜೆ ಹೆಚ್ಚಾಗಿರುವುದರಿಂದ ಶಾಲಾ ದಿನಗಳು ಕಡಿಮೆಯಾಗಿವೆ ಎನ್ನಲಾಗಿದೆ. ಮೇ 29ರಿಂದ ಶಾಲೆಯೂ ಆರಂಭಗೊಳ್ಳಲಿದೆ.

ಹಾಗೆಯೇ ಕಳೆದ ಶೈಕ್ಷಣಿಕ ವರ್ಷದಲ್ಲಿ ಅ. 3ರಿಂದ 16ರ ವರೆಗೆ 14 ದಿನ ಮಾತ್ರ ದಸರಾ ರಜೆ ನಿಗದಿ ಪಡಿಸಲಾಗಿತ್ತು. ಆದರೆ ಈ ವರ್ಷ ಅ. 8ರಿಂದ ಅ. 25ರ ತನಕ 20 ದಿನ ರಜೆ ಇರಲಿದೆ.

ಈ ಶೈಕ್ಷಣಿಕ ವರ್ಷದಲ್ಲಿ 244 ಶಾಲಾ ಕರ್ತವ್ಯದ ದಿನಗಳನ್ನು ಸರಕಾರ ನಿಗದಿ ಪಡಿಸಿದೆ. ಹಾಗಾಗಿ ಈ ವರ್ಷ 180 ಬೋಧನಾ – ಕಲಿಕೆ ದಿನಗಳಿರಲಿವೆ. ಆದರೆ, ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಕಲಿಕಾ ದಿನಗಳಿದ್ದವು ಎನ್ನಲಾಗಿದೆ.

ಹಾಗೆಯೇ ಪರೀಕ್ಷೆಗಳು (exam) ಮತ್ತು ಮೌಲ್ಯಾಂಕನ ಪ್ರಕ್ರಿಯೆಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ / ಪಠ್ಯ ಚಟುವಟಿಕೆಗಳ/ ಸ್ಪರ್ಧೆಗಳ ನಿರ್ವಹಣೆ ಕಾರ್ಯಕ್ಕಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫ‌ಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು ಮತ್ತು ಶಾಲಾ ಸ್ಥಳೀಯ ರಜೆಗಳು ಎಂದು ನಾಲ್ಕು ದಿನವನ್ನು ನಿಗದಿಪಡಿಸಲಾಗಿದೆ.

ಸರಕಾರದ (government) ಈ ವೇಳಾಪಟ್ಟಿಗೆ (time table) ಪ್ರಾಥಮಿಕ ಶಿಕ್ಷಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಹತ್ತರಿಂದ ಹದಿನೈದು ದಿನ ಹೆಚ್ಚುವರಿಯಾಗಿ ಶಿಕ್ಷಣ ಚಟುವಟಿಕೆ ನಿರ್ವಹಿಸಲು ಸೂಚಿಸಲಾಗಿದೆ. ಕಳೆದ ವರ್ಷದ ಕೋವಿಡ್‌ ಪ್ರಭಾವಿತ ಶೈಕ್ಷಣಿಕ ವರ್ಷಕ್ಕೆ ಈ ಶೈಕ್ಷಣಿಕ ವರ್ಷವನ್ನು ಹೋಲಿಸಲಾಗಲ್ಲ. ದಸರಾ ರಜೆಯನ್ನು ಕೇವಲ 20 ದಿನಗಳಿಗೆ ಸೀಮಿತಗೊಳಿಸಿರುವುದು ಸರಿಯಲ್ಲ. ಮೊದಲಿನಂತೆ ಅ. 2ರಿಂದ 30ರ ತನಕ ದಸರಾ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ನುಗ್ಗಲಿ ಆಗ್ರಹಿಸಿದ್ದಾರೆ.

Leave A Reply

Your email address will not be published.