Karnataka Election: ಈ ಬಾರಿ ಬೊಮ್ಮಾಯಿ ಸಿಎಂ ಆಗಲ್ಲ, ಇವ್ರೆ ನೋಡಿ ನೆಕ್ಸ್ಟ್ ಮುಖ್ಯಮಂತ್ರಿ !
Arvind Bellad: ಶಾಸಕ ಅರವಿಂದ ಬೆಲ್ಲದ್ (Arvind Bellad) , ಈ ಬಾರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿ ಆಗಲ್ಲ. ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರು ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಈ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ.
ಧಾರವಾಡದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಲ್ಲದ್, ಈ ಬಾರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವುದಿಲ್ಲ. ಬಿಜೆಪಿಯಲ್ಲಿ (bjp) ಲಿಂಗಾಯತ ಸಮುದಾಯದ ಚಿಕ್ಕ ವಯಸ್ಸಿನವರು ಸಿಎಂ ಆಗಲಿದ್ದಾರೆ ಎಂದು ಹೇಳಿದರು.
ಈಗಾಗಲೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Ex-CM Jagadish Shettar) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯೂ ಆಗಿದ್ದಾರೆ.
ಈ ಬಗ್ಗೆ ಮಾತನಾಡಿದ ಬೆಲ್ಲದ್, ಟಿಕೆಟ್ ಸಿಗದ್ದಕ್ಕೆ ಜಗದೀಶ್ ಶೆಟ್ಟರ್ ಅವರು ಅಸಮಾಧಾನಗೊಂಡು ಬಿಜೆಪಿ ತೊರೆಯಲು ಮುಂದಾದಾಗ ನಮ್ಮ ಪಕ್ಷದ ವರಿಷ್ಠರು ಶೆಟ್ಟರ್ ಅವರೊಂದಿಗೆ ಚರ್ಚೆ ಮಾಡಿದ್ದರು. ಈ ಬಾರಿ ಬಿಜೆಪಿ ಸರ್ಕಾರದಲ್ಲಿ ಕಿರಿಯ ವಯಸ್ಸಿನವರು ಮುಖ್ಯಮಂತ್ರಿಯಾಗಲಿದ್ದಾರೆ. ಅವರ ಸಚಿವ ಸಂಪುಟದಲ್ಲಿ ನೀವು ಸಚಿವರಾಗಿರುವುದು ಅಷ್ಟೊಂದು ಸರಿಯಲ್ಲ ಎಂದು ಹೇಳಿದ್ದರು. ಅಲ್ಲದೆ, ನಿಮ್ಮನ್ನು ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಅವರು ಸಮ್ಮತಿ ಸೂಚಿಸದೆ ಬಿಜೆಪಿ ತೊರೆದರು.
ವಕೀಲರಾಗಿದ್ದ ಶೆಟ್ಟರ್ ಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮಂತ್ರಿಯನ್ನಾಗಿ ಮಾಡಿ ಕೊನೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ರಾಜಕೀಯದ ನಂತರ ಜಗದೀಶ್ ಶೆಟ್ಟರ್ ಅವರು, ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ಬಿಜೆಪಿ ತೊರೆದು ಕಾಂಗ್ರೆಸ್ (congress) ಸೇರಿರೋದು ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗಂತ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದರು. ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ ಗೊತ್ತಿದೆ. ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡರೆ ಅವರನ್ನು ಮೂಲೆಗುಂಪು ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಇದನ್ನೂ ಓದಿ: KEA: KEA ಇಂದ ಐದು ಇಲಾಖೆ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ!