7th Pay Commission: ಸರ್ಕಾರಿ ನೌಕರರಿಗೆ 3 ಶೇ. DA ಏರಿಕೆ, 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಿಂಗಳಿಗೆ 1500 ಪಾಕೆಟ್ ಮನಿ!
7th Pay Commission and DA : ಈಗಾಗಲೇ ಕೇಂದ್ರ ಸರ್ಕಾರವು ತುಟ್ಟಿಭತ್ಯೆ (7th Pay Commission and DA)ಅನ್ನು ಏರಿಕೆ ಮಾಡುವ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ತುಟ್ಟಿ ಭತ್ಯೆ (ಡಿಎ) ಮತ್ತು ಡಿಯರೆನ್ಸ್ ರಿಲೀಫ್ (ಡಿಆರ್- ತುಟ್ಟಿಭತ್ಯೆ ಪರಿಹಾರ) ಶೇಕಡ 4ರಷ್ಟು ಏರಿಕೆ ಮಾಡಿದೆ.
ಈ ನಡುವೆ ಕೆಲವು ರಾಜ್ಯ ಸರ್ಕಾರಗಳು ಕೂಡಾ ತುಟ್ಟಿಭತ್ಯೆ ಏರಿಕೆಯ ಕ್ರಮವನ್ನು ಕೈಗೊಂಡಿದೆ. ಈಗ ಹಿಮಾಚಲ ರಾಜ್ಯವೊಂದರಲ್ಲಿ ಸರ್ಕಾರವು ಡಿಎ ಏರಿಕೆಯನ್ನು ಮಾಡಿದೆ. ಶನಿವಾರ 76ನೇ ಹಿಮಾಚಲ ದಿನವನ್ನು ಆಚರಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿಶೇಷವಾದ ಉಡುಗೊರೆ ಒಂದನ್ನು ಸರ್ಕಾರಿ ನೌಕರರಿಗೆ ನೀಡಿದ್ದಾರೆ.
ಹಿಮಾಚಲ ಪ್ರದೇಶ ಸರ್ಕಾರವು ಸರ್ಕಾರಿ ನೌಕರರಿಗೆ ಹಾಗೂ ಮಹಿಳೆಯರಿಗಾಗಿ ಡಿಎ ಹಾಗೂ ಆರ್ಥಿಕ ಸಹಾಯದ ಘೋಷಣೆಯನ್ನು ಮಾಡಿದೆ. ಈಗಾಗಲೇ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುಂದಾಳತ್ವದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 9,000 ಮಹಿಳೆಯರಿಗೆ ಮಾಸಿಕವಾಗಿ 1500 ರೂಪಾಯಿ ಆರ್ಥಿಕ ಸಹಾಯ ಘೋಷಣೆ ಮಾಡಿದ್ದಾರೆ. ಇದು ಜೂನ್ 2023 ರಿಂದ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ತಿಳಿಸಲಾಗಿದೆ.
ಮುಖ್ಯವಾಗಿ ಸರ್ಕಾರಿ ನೌಕರರಿಗೆ ಡಿಎ ಏರಿಕೆ ಮಾಡಲಾಗಿದ್ದು, ಇದು ನಿವೃತ್ತಿ ಹೊಂದಿರುವವರಿಗೂ ಅನ್ವಯವಾಗಲಿದೆ. ಪ್ರಸ್ತುತ ಹಿಮಾಚಲ ಪ್ರದೇಶ ಸರ್ಕಾರವು ಶೇಕಡ 3ರಷ್ಟು ಡಿಎ ಏರಿಕೆ ಮಾಡುವ ಘೋಷಣೆಯನ್ನು ಮಾಡಿದೆ.
ಸರ್ಕಾರಿ ನೌಕರರಿಗೆ ಡಿಎಯನ್ನು ಶೇಕಡ 31ರಿಂದ ಶೇಕಡ 34ಕ್ಕೆ ಏರಿಕೆ ಮಾಡಿದ್ದು ಇದು ಸುಮಾರು 2.15 ಲಕ್ಷ ಉದ್ಯೋಗಿಗಳಿಗೆ ಮತ್ತು 1.90 ಲಕ್ಷ ನಿವೃತ್ತಿದಾರರಿಗೆ ಪ್ರಯೋಜನವಾಗಿದೆ.
ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸುಮಾರು 500 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಸರ್ಕಾರ ತಿಳಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರವು ಮಾರ್ಚ್ ತಿಂಗಳಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಏರಿಕೆ ಮಾಡಿದೆ. ಇದೀಗ ಮತ್ತೆ ಕೇಂದ್ರ ಸರ್ಕಾರವು ಜುಲೈ ತಿಂಗಳಿನಲ್ಲಿ ತುಟ್ಟಿಭತ್ಯೆಯನ್ನು ಏರಿಕೆ ಮಾಡುವ ಸಾಧ್ಯತೆಯ ಬಗ್ಗೆ ವರದಿಯಾಗಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಷ್ಟತೆಯು ದೊರೆತಿಲ್ಲ. ಕಳೆದ ನಾಲ್ಕು ತಿಂಗಳ ಡೇಟಾವನ್ನು ಪರಿಶೀಲನೆ ಮಾಡಿ ನೋಡಿದ ತಜ್ಞರ ಪ್ರಕಾರ ಜುಲೈನಲ್ಲಿ ಕೇಂದ್ರ ಸರ್ಕಾರವು ಶೇಕಡ 4ರಷ್ಟು ಡಿಎಯನ್ನು ಹೆಚ್ಚಳ ಮಾಡಲಿದೆ. ಆದರೆ ಕೇಂದ್ರ ಸರ್ಕಾರವು ಡಿಎ ಏರಿಕೆಗೆ ಹೊಸ ಸೂತ್ರವನ್ನು ಜಾರಿ ಮಾಡುವ ಸಾಧ್ಯತೆಯಿದೆ ಎಂದು ಕೂಡಾ ವರದಿಯಾಗಿದೆ.
ಒಟ್ಟಿನಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಹಾಗೂ ಪಿಂಚಣಿದಾರರಿಗೆ ಪ್ರಸ್ತುತ ಶೇಕಡ 42ರಷ್ಟು ಡಿಎಯನ್ನು ನೀಡುತ್ತದೆ. ಕೇಂದ್ರ ಸರ್ಕಾರವು ಕಳೆದ ಬಾರಿ ಶೇಕಡ 4ರಷ್ಟು ಡಿಎ ಏರಿಕೆ ಮಾಡಲಾಗಿದೆ.
ಇದನ್ನೂ ಓದಿ: ಕಿಚ್ಚ ಸುದೀಪ್ BJP ಯಿಂದ ಸ್ಪರ್ಧೆ ?