Social media BBMP Offer: ರೀಲ್ಸ್, ಜಿಂಗಲ್ಸ್ ಇತ್ಯಾದಿ ಮಾಡೋರಿಗೆ ಬಂಪರ್, BBMP ಕೊಡುತ್ತೆ 10,000 ದ ಸಕತ್ ಆಫರ್ !

Social media BBMP Offer: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೀಗ ಸೋಶಿಯಲ್ ಮೀಡಿಯಾ ಸ್ಟಾರ್ಸ್‌ಗಳಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲುವುದಕ್ಕೆ ಭರ್ಜರಿ ಆಫರ್ ( Social media BBMP Offer)ನೀಡಿದೆ. ಇತ್ತೀಚೆಗೆ ಜಾಗತಿಕವಾಗಿ ಸೋಶಿಯಲ್ ಮೀಡಿಯಾ ಸ್ಟಾರ್ಸ್‌ಗಳು ಕೂಡ ಯಾವುದೇ ಸಿನಿಮಾ ಮತ್ತು ಕಿರುತೆರೆ ನಟರಿಗಿಂತ ಕಡಿಮೆಯೇನಿಲ್ಲ. ಯಾಕೆಂದರೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಲೇ ಭರ್ಜರಿ ಅಭಿಮಾನಿಗಳನ್ನು ಹೊಂದುವ ಜೊತೆಗೆ ಮಾಸಿಕ ಲಕ್ಷಾಂತರ ರೂ. ಸಂಪಾದನೆ ಮಾಡುತ್ತಿದ್ದು, ಇದೊಂದು ಹೆಮ್ಮೆಯ ವಿಚಾರವೂ ಹೌದು.

ಸದ್ಯ ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಬಿಬಿಎಂಪಿಯು ವಿನೂತನವಾಗಿ “ವೋಟ್-ಎ-ಥಾನ್” (VOTE-A-THON) ಸ್ಪರ್ಧೆಯನ್ನು ಏರ್ಪಡಿಸಿದೆ.

ಸ್ಪರ್ಧೆಯಲ್ಲಿ ಬೆಂಗಳೂರಿನ ಜನತೆ ಚುನಾವಣೆ ಕುರಿತು ರೀಲ್ಸ್, ಪೋಸ್ಟರ್ಸ್, ಪ್ಲೋಗನ್ ಮತ್ತು ಜಿಂಗಲ್ಸ್ ಗಳನ್ನು ಮಾಡುವ ವೋಟ್-ಎ-ಥಾನ್ ಸ್ಪರ್ಧೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಇಂದು ಚಾಲನೆ ನೀಡಿದ್ದು, ಈ ಬಗ್ಗೆ ಮಾತನಾಡಿದ ಅವರು, ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಾಗೂ ಪಾಲಿಕೆ ವತಿಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇದೀಗ ವೋಟ್-ಎ- ಥಾನ್ ಎಂಬ ವಿನೂತನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಚುನಾವಣೆಯ ವೇಳೆ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಉತ್ತಮ ಸಂದೇಶವುಳ್ಳ ರೀಲ್ಸ್ ಮಾಡಿದವರಿಗೆ 10 ಸಾವಿರ ರೂ. ಬಹುಮಾನವನ್ನು ನೀಡುವುದಾಗಿ ಘೋಷಣೆ ಮಾಡಿದರು.

ಮುಖ್ಯವಾಗಿ ವೊಟ್-ಎ-ಥಾನ್ ಸ್ಪರ್ಧೆಯ ಮೂಲಕ, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮತದಾರರಲ್ಲಿ ಉತ್ಸಾಹವನ್ನು ಉಂಟುಮಾಡುವ ಗುರಿಯನ್ನು ನಾವು ಹೊಂದಿದ್ದೇವೆ ಎಂಬುದಾಗಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.

ಸದ್ಯ ವೋಟ್-ಎ- ಥಾನ್ ಸ್ಪರ್ಧೆಯು ಬೆಂಗಳೂರು ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 17 ರಿಂದ ಏಪ್ರಿಲ್ 30 ರವರೆಗೆ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಕ್ರಿಯಾತ್ಮಕ ಆಲೋಚನೆಗಳ ಮೂಲಕ ರೀಲ್ಸ್, ಪೋಸ್ಟರ್ಸ್, ಪ್ಲೋಗನ್ ಮತ್ತು ಜಿಂಗಲ್ಸ್ ಗಳನ್ನು ಮಾಡಿ ಹ್ಯಾಶ್ ಟ್ಯಾಗ್ (#Vote-A- Thon) ಬಳಸಿ ಸಾಮಾಜಿಕ ಜಾಲತಾಣದಲ್ಲಿ ಹಾಕುವುದು. ಅಥವಾ ಇ-ಮೇಲ್ ಐಡಿ contact- us@bbmp.gov.in ಪೋಸ್ಟರ್ಸ್, ಸ್ಲೋಗನ್ ಮತ್ತು ಜಿಂಗಲ್ಸ್ ಗಳನ್ನು ಏಪ್ರಿಲ್ 30 ರೊಳಗಾಗಿ ಕಳುಹಿಸಬೇಕು.

ಒಟ್ಟಿನಲ್ಲಿ ಕ್ರಿಯಾತ್ಮಕವಾಗಿ ರಚಿಸಿದ ರೀಲ್ಸ್, ಪೋಸ್ಟರ್ಸ್, ಪ್ಲೋಗನ್ ಮತ್ತು ಜಿಂಗಲ್ಸ್ ಗಳಿಗೆ ನಗದು ಬಹುಮಾನ, ಪ್ರಮಾಣ ಪತ್ರ ಹಾಗೂ ಇನ್ನಿತರ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : Nandini-Amul: ನಂದಿನಿ Vs ಅಮುಲ್ ಹಾಲು ನಡುವೆ ಹಾಳು ಹಾಲಾಹಲದ ಗುಜರಾತ್ ಸಿಎಂ ಹೇಳಿದ್ದೇನು ಗೊತ್ತೇ ?

Leave A Reply

Your email address will not be published.