Kichcha Sudeep: ಇವತ್ತಿನಿಂದ ಕಿಚ್ಚ ಸುದೀಪ್ ಪ್ರಚಾರ ಶುರು, ಈ ಕ್ಷೇತ್ರದಿಂದ ಶುರುವಾಗುತ್ತೆ ಕಿಚ್ಚನ ರಾಜಕೀಯ !

Share the Article

Kichcha Sudeep’s campaign start : ಹಾವೇರಿಯ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿ ಪರ ಪ್ರಚಾರ ಶುರು (Kichcha Sudeep’s campaign start) ಮಾಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಏಪ್ರಿಲ್ 19 ರ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಚಿತ್ರನಟ ಸುದೀಪ್ ಸೇರಿದಂತೆ ಹಲವು ಸಿನಿ ತಾರೆಯರು ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್ ಸೇರಿದಂತೆ ಸರ್ಕಾರದ 10 ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ.

ಸಿಎಂ ಬೊಮ್ಮಾಯಿ ಅವರೊಂದಿಗೆ ಇಂದು ಬೆಳಗ್ಗೆ 10.30 ಕ್ಕೆ ಹುಬ್ಬಳ್ಳಿಯಿಂದ ಹೊರಟು ಶಿಗ್ಗಾಂವಿಗೆ 10.50 ಕ್ಕೆ ಕಿಚ್ಚ ಸುದೀಪ್ ತಲುಪಲಿದ್ದಾರೆ. ನಂತರ ಶಿಗ್ಗಾಂವಿ ಸಂತೆ ಮೈದಾನದಿಂದ ಭರ್ಜರಿ ರೋಡ್ ಶೋ ನಡೆಸಲಿರುವ ಸಿಎಂ ಬೊಮ್ಮಾಯಿ, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲೂಕು ಕ್ರೀಡಾಂಗಣದವರೆಗೆ ಸಾಗಲಿದ್ದಾರೆ. ಅಲ್ಲಿ ಮದ್ಯಾಹ್ನ 12.15 ರಿಂದ ಮಧ್ಯಾಹ್ನ 1.30 ರವರೆಗೆ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಶಿಗ್ಗಾಂವಿ ತಹಸೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಅಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಗರು ಮತ್ತು ನಟ ಕಿಚ್ಚ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.

Leave A Reply