Rain Forecast: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ:ಹವಾಮಾನ ಇಲಾಖೆ ಮುನ್ಸೂಚನೆ!

Rain Forecast: ಬಿಸಿಲ ಬೇಗೆಗೆ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಮಳೆಗೆ ಎದುರು ನೋಡುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲವೆಡೆ ವರುಣ ದರ್ಶನ ನೀಡಿದ್ದು, ದಾವಣಗೆರೆ, ಚಿಕ್ಕಮಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಹವಾಮಾನ ಇಲಾಖೆ ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಲಘು ಮಳೆಯಾಗುವ (Rain Forecast)ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ (Karnataka Rains) ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ಹಾಸನ (Hassan Rain) ಜಿಲ್ಲೆಯಲ್ಲಿ ಮಳೆಯಾಗಿದ್ದು, ಬೆಳಗಾವಿಯಲ್ಲಿ ಕೂಡ (Belagavi Rain) ಗಾಳಿ ಸಹಿತ ಮಳೆಯಾಗಿದ್ದು, ಗದಗ ಸೇರಿದಂತೆ ರಾಜ್ಯದ ಕೆಲವೆಡೆ ಮಳೆಯಾಗಿದ್ದು ಹೀಗಾಗಿ ಜನರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಆದರೆ, ಇನ್ನೂ ಕೆಲವೆಡೆ ಒಂದು ಬಾರಿಯು ವರುಣ ದರ್ಶನ ನೀಡದ ಹಿನ್ನೆಲೆ ಜನರು ಬಿರು ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಮಳೆಗಾಗಿ ಎದುರು ನೋಡುತ್ತಿದ್ದಾರೆ.

ಕರಾವಳಿಯಲ್ಲಿ ಬಿಸಿಲಿನ ಝಳದಿಂದ ಜನರು ಹೈರಾಣಾಗಿ ಹೋಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 21 ರಿಂದ 25 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 21, 22 ರಂದು ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಏಪ್ರಿಲ್ 21ರಿಂದ 25ರ ವರೆಗೆ ಆಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆಯ ವಾತಾವರಣಇರಲಿದ್ದು, ಏಪ್ರಿಲ್ 21ರಿಂದ 25ರ ವರೆಗೆ ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳ ಹೆಚ್ಚಿನ ಕಡೆಗಳಲ್ಲಿ ಮಳೆಯಾಗುವ ಸಂಭವವಿದೆ. ಏಪ್ರಿಲ್ 23ರಿಂದ 25ರ ನಡುವೆ ಚಾಮರಾಜನಗರ, ಕೋಲಾರ, ಮೈಸೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ನಿರೀಕ್ಷೆಯಿದೆ. ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಏಪ್ರಿಲ್ 23 ರಿಂದ 25 ರವರೆಗೆ ಲಘು ಮಳೆ ಆಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 21, 22 ಮತ್ತು 25 ರಂದು ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ವೀರ್ಯ ದಾನದ ಮೂಲಕ ಮಗು ಮಾಡಿಕೊಂಡ ಈ ಫೇಮಸ್ ನಟಿಯ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು !

Leave A Reply

Your email address will not be published.