D K Suresh: ನಾನು ಕನಕಪುರದಿಂದ ಕಣಕ್ಕಿಳಿಯೋದು ಯಾಕೆ ಗೊತ್ತಾ? ರೋಚಕ ಸತ್ಯ ಬಿಚ್ಚಿಟ್ಟ ಡಿ.ಕೆ. ಸುರೇಶ್​!

D K Suresh: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಮುಕ್ತಾಯವಾಗಿದ್ದು ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ ಬೆಂಗಳೂರು ಗ್ರಾಮಾಂತರದ ಸಂಸದ ಡಿಕೆ ಸುರೇಶ್‌(D K Suresh) ಅವರು ತಾವೇಕೆ ಕನಕಪುರ(Kanakapura) ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದೇನೆ ಎಂಬುದರ ಬಗ್ಗೆ ಮಾತನಾಡಿದ್ದಾರೆ.

ಹೌದು, ಒಕ್ಕಲಿಗರೇ ಹೆಚ್ಚಿರುವ ಕನಕಪುರ(Kanakapura) ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಹಾಗೂ ಪ್ರಭಾವಿ ಶಾಸಕ, ನಾಯಕರಾಗಿರುವ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊಕ್ ನೀಡುವ ನಿಟ್ಟಿನಲ್ಲಿ ಬಿಜೆಪಿಯು ತನ್ನ ಪ್ರಭಾವಿ ನಾಯಕ, ಒಕ್ಕಲಿಗ ನಾಯಕ, ಪದ್ಮನಾಭ ನಗರದ ಶಾಸಕ ಆರ್ ಅಶೋಕ್ ಅವರನ್ನು ಕನಕಪುರದಿಂದ ಕಣಕ್ಕಿಳಿಸಿದೆ. ಇದರಿಂದ ಎಚ್ಚೆತ್ತ ಕಾಂಗ್ರೆಸ್ ಬಿಜೆಪಿಗೆ ಶಾಕ್ ಕೊಡಲು ಅಶೋಕ್ ಅವರ ಹಾಲಿ ಕ್ಷೇತ್ರ ಪದ್ಮನಾಭ ನಗರಕ್ಕೆ ಕಾಂಗ್ರೆಸ್ ನ ಮತ್ತೊಬ್ಬ ಪ್ರಭಾವಿ ನಾಯಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್‌ (DK Suresh) ಅವರನ್ನು ಕಣಕ್ಕಿಳಿಸಿದ್ದು ಇದರ ಬಗ್ಗೆ ಅವರು ಮಾತನಾಡಿದ್ದಾರೆ.

ಕನಕಪುರದಲ್ಲಿ ನಾಮಪತ್ರ ಸಲ್ಲಿಸಿರುವುದರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿಕೆ ಸುರೇಶ್ ಅವರು “ಕನಕಪುರದಿಂದ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ಸೂಚನೆ ನೀಡಿತ್ತು. ಕೆಲವೊಂದು ಕುತಂತ್ರಗಳು ನಡೆಯುತ್ತಿದೆ ಎಂದು ಗೊತ್ತಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಮ ಪಾತ್ರ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದರು.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಅಲ್ಲದೆ ಡಿಕೆಶಿಯನ್ನು ಬಂಧಿಸುವುದು, ನೋಟಿಸ್ ನಿಡುವುದನ್ನು ನಿವೆಲ್ಲ ನೋಡಿದ್ದೀರಿ. ನಾಲ್ಕು ದಿನದ ಹಿಂದೆ ಕೂಡ ಚೆನೈನಿಂದ ಐಟಿ ಅವರು ನೋಟಿಸ್ ನೀಡಿದರು. ಖುದ್ದು ನೀವೆ ಹಾಜರಾಗಬೇಕು ಎಂದು ಹೇಳಿದ್ದಾರೆ. ಚುನಾವಣೆ ಆದ್ಮಲೇ ನಾವು ಬರ್ತೇವೆ ಎಂದು ಐಟಿ ಅವರಿಗೆ ಹೇಳಿದ್ದೇವೆ. ಅನವಶ್ಯಕವಾಗಿ ನಾವು ಬರೋದಿಲ್ಲ ಎಂದು ಹೇಳಿದ್ದೇವೆ. ನಮ್ಮ ಮೇಲಿನ ಕೇಸ್​ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳು ಇವೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.

 

ಇದನ್ನು ಓದಿ : Khushboo Sundar: ನಟಿ ಖುಷ್ಬೂ ಅವರ ಬೆಡ್‌ರೂಮ್‌ನಲ್ಲಿ ಈ ನಟನ ಫೋಟೋ ಇದೆ! ರೊಮ್ಯಾನ್ಸ್‌ ಮಾಡೋ ಆಸೆ ಇದೆ ಎಂದ ಖುಷ್ಬೂ!!!

Leave A Reply

Your email address will not be published.