RTE Application: ಆರ್ ಟಿಇ ದಾಖಲಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

RTE Application : ಈಗಾಗಲೇ ಆರ್‌ಟಿಇ (RTE) ಮೂಲಕ ಪ್ರವೇಶಾತಿ ಆರಂಭವಾಗಿದ್ದು, ಈ ಹಿಂದೆ ಶಿಕ್ಷಣ ಹಕ್ಕು ಕಾಯ್ದೆಯ ಅಡಿಯಲ್ಲಿ (RTE Admission 2023) ಉಚಿತವಾಗಿ ಪ್ರವೇಶಕ್ಕೆ ಅರ್ಜಿ ಹಾಕಲು (RTE Application) ಸಾರ್ವಜನಿಕ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 20-04- 2023 ಕೊನೆಯ ದಿನವಾಗಿತ್ತು. ಆದರೆ, ಇದೀಗ ಈ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

 

ಪೋಷಕರು (parents) ಹಾಗೂ ವಿದ್ಯಾರ್ಥಿಗಳು (students) ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದು, ಅವರ ಕೋರಿಕೆಯ ಹಿನ್ನೆಲೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಮುಂದೂಡಲಾಗಿದ್ದು, ದಿನಾಂಕ 10-05-2023ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಶಾಲಾ ಶಿಕ್ಷಣ ಇಲಾಖೆಯ ( Education Department ) ಪ್ರಾಥಮಿಕ ಶಿಕ್ಷಣದ ನಿರ್ದೇಶಕರು
“2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20-04- 2023ರವರೆಗೆ ನೀಡಲಾಗಿತ್ತು. ಆದರೆ, ಪೋಷಕರು ಹಾಗೂ ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ 10-05-2023ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ” ಎಂದು ಹೇಳಿದರು.

ಅರ್ಜಿ ಸಲ್ಲಿಕೆಯ ಪರಿಷ್ಕೃತ ವೇಳಾಪಟ್ಟಿ:

Karnataka Election: ನಾಮಪತ್ರ ವೇಳೆ ಶೆಟ್ಟರ್‌ ಜೊತೆ ಕಾಣಿಸಿಕೊಂಡ ಕಾರ್ಪೊರೇಟರ್‌ ಅರೆಸ್ಟ್‌!

 

Leave A Reply

Your email address will not be published.