Bangalore Accident: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅವಘಡ, 4 ಸಾವು, 22 ಮಂದಿಗೆ ಗಾಯ

Bangalore Accident: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ(Bangalore Accident) ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ವಿರುದ್ಧ ದಿಕ್ಕಿನಿಂದ ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮುಂಜಾನೆ 3 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಮಗುಚಿ ಬಿದ್ದಿದ್ದು ಎಲ್ಲಾ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಪುಣೆಯ ಸಮೀಪದ ನಾರ್ಹೆ ಪ್ರದೇಶದಲ್ಲಿ ಈ ಹೆಡ್ ಆನ್ ಕೊಳಿಷನ್ ನಡೆದಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಕಱಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.

Leave A Reply

Your email address will not be published.