Jagadish Shettar: ಶೆಟ್ಟರ್ ಬೇರೆ ಟೀಮ್ ಸೇರಿ ಬ್ಯಾಟ್ ಮಾಡಿದ್ರೂ, ಈ ಸಲವೂ ಕಪ್ ನಮ್ದೆ!

Jagadish Shettar-Pralhad Joshi: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಕಣಕ್ಕಿಳಿಸುವುದಿಲ್ಲ ಎಂದು ಬಿಜೆಪಿ ನಾಯಕತ್ವ ಈಗಾಗಲೇ ಸ್ಪಷ್ಟಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಪಕ್ಷವನ್ನೇ ತೊರೆದಿದ್ದಾರೆ.

 

ಜಗದೀಶ್ ಶೆಟ್ಟರ್ ಪ್ರಕಾರ, ಬಿಜೆಪಿಯಿಂದ ಟಿಕೆಟ್ ನಿರಾಕರಿಸಿ ಅವಮಾನ ಮಾಡಲಾಗಿದೆ ಎಂದು ಶೆಟ್ಟರ್ ಆಪಾದಿಸಿದ್ದು, ಆ ಪಕ್ಷ ಇಂದು ‘ಅತಿ ಕಡಿಮೆ ಜನರ ಹಿಡಿತದಲ್ಲಿದೆ. “ನಾನು ಕಟ್ಟಿದ ಪಕ್ಷದಿಂದ ಬಲವಂತವಾಗಿ ಹೊರಹಾಕಲ್ಪಟ್ಟಿದ್ದೇನೆ.ನಾನು ಅದರ ಸಿದ್ಧಾಂತ ಮತ್ತು ತತ್ವಗಳನ್ನು ಒಪ್ಪಿಕೊಂಡು ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸದ್ಯ ಬಿಜೆಪಿ ಪಕ್ಷವನ್ನು ತೊರೆದ ಜಗದೀಶ್ ಶೆಟ್ಟರ್ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಆದರೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಷ ತೊರೆದಿರುವುದರಿಂದ ಬಿಜೆಪಿಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದೆವು ಆದರೆ, ಅವರು ಮತ್ತೊಂದು ಟೀಮ್‌ನಲ್ಲಿ ಆಡುವುದಕ್ಕೆ ಹೋಗಿದ್ದಾರೆ. ಇದರಿಂದ ನಮ್ಮ ಟೀಮ್ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಕಪ್ ನಮ್ಮದೇ. ಸೆಂಟ್ರಲ್ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ಜೋಶಿ(Jagadish Shettar-Pralhad Joshi) ಭರವಸೆ ವ್ಯಕ್ತಪಡಿಸಿದರು.

ಅದಲ್ಲದೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ ಅವರು , ಲಿಂಗಾಯತ ಸಮುದಾಯವನ್ನು ಬಿಜೆಪಿ ಎಂದಿಗೂ ಅಸ್ತ್ರವಾಗಿ ಬಳಸಿಕೊಂಡಿಲ್ಲ. ನಾವು ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಯಾವತ್ತಿಗೂ ಹೇಳಿಲ್ಲ. ಕಾಂಗ್ರೆಸ್ಸಿನವರಿಗೆ, ರಾಹುಲ್ ಗಾಂಧಿಗೆ ಪ್ರೀತಿ ಇದ್ದರೆ ಮುಂದೆ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಘೋಷಣೆ ಮಾಡಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಅದಲ್ಲದೆ ನಾವು ಈಗಾಗಲೇ ಮೂರು ಜನ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಚುನಾವಣೆಯ ನಂತರ ನಮ್ಮ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಈ ಚುನಾವಣೆಗೆ ಹೋಗುತ್ತೇವೆ. ಖಂಡಿತಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಗಾಂಧಿ(Rahul gandhi) ಆಪರೇಶನ್ ಮಾಡಲು ಕಮಲ ಬಿಡುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ , ರಾಹುಲ್ ಗಾಂಧಿ ಸರಿಯಾಗಿಯೇ ಹೇಳಿದ್ದಾರೆ. ನಾವೇ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತ. ಹೀಗಾಗಿ ಆಪರೇಷನ್ ಕಮಲ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಟೀಕೆ ಮಾಡಿದ್ದಾರೆ.

ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತರಿಗೆ ಅವಮಾನ ಮಾಡಿದ್ದಾರೆ. ಈವರೆಗೂ ಕ್ಷಮೆ ಕೇಳಿಲ್ಲ. ಈಗಲಾದರೂ ಜನರ ಮುಂದೆ ಬಹಿರಂಗವಾಗಿ ಕ್ಷಮೆ ಕೋರಲಿ ಎಂದ ಅವರು, ಈ ಕುರಿತು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಇಷ್ಟೆಲ್ಲಾ ಆರೋಪ ನಿಮ್ಮ ಮೇಲಿದ್ದರು ಕಮಲ ದ ಮೇಲೆ ಹರಿಹಾಯ್ದು ಬಂದರೆ ಮುಂದೆ ಒಂದು ದಿನ ಕಮಲದ ಮುಂದೆ ತಲೆತಗ್ಗಿಸಬೇಕಾಗಬಹುದು ಎಂದು ಜೋಶಿ ವ್ಯಂಗ್ಯ ವಾಡಿದ್ದಾರೆ.

ಇದನ್ನೂ ಓದಿ: Rohit Sharma: ಐಪಿಎಲ್ ನಲ್ಲಿ ಅಪರೂಪದ ದಾಖಲೆ ಮಾಡಿದ ರೋಹಿತ್!

Leave A Reply

Your email address will not be published.