Rohit Sharma: ಐಪಿಎಲ್ ನಲ್ಲಿ ಅಪರೂಪದ ದಾಖಲೆ ಮಾಡಿದ ರೋಹಿತ್ ಶರ್ಮಾ !
Rohit Sharma : ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ (Rohit Sharma) ಖ್ಯಾತ ಕ್ರಿಕೆಟಿಗನಾಗಿದ್ದು, ಇದೀಗ ಅವರ ಹೆಸರಲ್ಲಿ ಮತ್ತೊಂದು ಅಪರೂಪದ ದಾಖಲೆ ಸೇರ್ಪಡೆಗೊಂಡಿದೆ. ರೋಹಿತ್ ಶರ್ಮಾ ಐಪಿಎಲ್ 2023ರ 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 44 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. 6 ರನ್‌ಗಳಿಂದ ಅರ್ಧಶತಕ ವಂಚಿತರಾದರು. ರೋಹಿತ್ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ರೋಹಿತ್ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸಲು ಸಾಧ್ಯವಾಗದಿದ್ದರೂ ಅವರ ಖಾತೆಯಲ್ಲಿ ಅಪರೂಪದ ದಾಖಲೆ ಸೇರ್ಪಡೆ ಆಗಿದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ.
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 250 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸದ್ಯ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಗೇಲ್ 142 ಪಂದ್ಯಗಳಲ್ಲಿ 357 ಸಿಕ್ಸರ್ ಬಾರಿಸಿದ್ದಾರೆ. ಗೇಲ್ ಐಪಿಎಲ್‌ನಲ್ಲಿ ಆಡದಿದ್ದರೂ, ಆ ದಾಖಲೆ ಇನ್ನೂ ಯಾರ ಹತ್ತಿರವೂ ಮುರಿಯಲು ಸಾಧ್ಯವಾಗಲಿಲ್ಲ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ. ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಒಟ್ಟು 251 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರಲ್ಲಿ ಗೇಲ್ ಮತ್ತು ಡಿವಿಲಿಯರ್ಸ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ.
ಇದನ್ನು ಓದಿ: Tips for shiny teeth: ಈ 4 ಟಿಪ್ಸ್ ಫಾಲೋ ಮಾಡಿದ್ರೆ ಸಾಕು, ನಿಮ್ಮ ಹಲ್ಲುಗಳು ಫಳ ಫಳ ಅಂತ ಹೊಳೆಯುತ್ತೆ!