Home Karnataka State Politics Updates Devanuru mahadeva: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ: ಬಿಜೆಪಿ ವಿರುದ್ಧ ಸಾಹಿತಿ ದೇವನೂರು ಮಹಾದೇವ...

Devanuru mahadeva: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ: ಬಿಜೆಪಿ ವಿರುದ್ಧ ಸಾಹಿತಿ ದೇವನೂರು ಮಹಾದೇವ ಕಿಡಿ!!

Devanuru mahadeva

Hindu neighbor gifts plot of land

Hindu neighbour gifts land to Muslim journalist

Devanuru mahadeva: ರಾಜ್ಯ ವಿಧಾನಸಭೆಯ ಚುನಾವಣೆಯ ನಿಮಿತ್ತ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಸಿನಿಮಾ ನಟ ನಟಿಯರು ಅಕಾಡಕ್ಕಿಳಿದು ಕ್ಯಾನ್ವಾಸ್ ಮಾಡುತ್ತಿದ್ದರು. ಇದೀಗ ಸಾಹಿತಿಗಳೂ ಕೂಡ ಈ ಫೀಲ್ಡ್ ಗೆ ಎಂಟ್ರಿಕೊಟ್ಟಂತೆ ಕಾಣುತ್ತಿದೆ. ಇದೀಗ ಕನ್ನಡದ ಖ್ಯಾತ ಸಾಹಿತಿ ದೇವನೂರು ಮಹಾದೇವ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಹೌದು, ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಕನ್ನಡದ ಹಿರಿಯ ಸಾಹಿತಿ ದೇವನೂರ ಮಹಾದೇವ (Devanuru mahadeva) ಮಾತನಾಡಿ ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ, ಈಗಿರುವ ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಈ ವೇಳೆ ಮಾತನಾಡಿದ ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಇದುವರೆಗೆ ಇಷ್ಟು ಜಾಗೃತರಾಗಿರಲಿಲ್ಲ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ.‌ ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಾರೆ ಎಂದು ಗುಡುಗಿದ್ದಾರೆ.

ಅಲ್ಲದೆ ಬಳಿಕ ಮಾತನಾಡಿದ ಅವರು ಬಿಜೆಪಿ ಬಾಯಿ ಬಿಟ್ರೆ ಕಾಂಗ್ರೆಸ್ ಏನ್ ಮಾಡ್ತು ಅಂತಾರೆ. ಆದ್ರೆ ಸಾರ್ವಜನಿಕ ಆಸ್ತಿಗಳನ್ನು ಕಾಂಗ್ರೆಸ್ ರಕ್ಷಣೆ ಮಾಡಿದೆ. ಡಬಲ್ ಎಂಜಿನ್‌ನ ಒಂದು ಎಂಜಿನ್‌ನಲ್ಲಿ ಧರ್ಮದ ದ್ವೇಷ, ಇನ್ನೊಂದು ಎಂಜಿನ್‌ನಲ್ಲಿ 40% ಕಮಿಷನ್‌ ಸೌಂಡ್ ಮಾಡ್ತಿದೆ ಅಷ್ಟೆ. ಬಿಜೆಪಿ ಸರ್ಕಾರವನ್ನು ಗುಜರಿಗೆ ಹಾಕಿ. ಭಾರತ್ ಜೋಡೊ ಯಾತ್ರೆಯ ಬಳಿಕ ಕಾಂಗ್ರೆಸ್ ಚೇತರಿಕೆ ಕಾಣುತ್ತಿದೆ. ಕಾಂಗ್ರೆಸ್ ಬಲವಾಗಿ ಇಲ್ಲದ ಕಡೆ ಜೆಡಿಎಸ್‌ನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸೋಣ‌‌ ಎಂದು ಕರೆ ನೀಡಿದರು.

 

ಇದನ್ನು ಓದಿ: Indian railways: IRCTC ಯಿಂದ ರೈಲು ಪ್ರಯಾಣಿಕರಿಗೆ ವಾರ್ನಿಂಗ್! ಈ ನಕಲಿ ಅಪ್ಲಿಕೇಶನ್ ಬಳಸದಂತೆ ತಾಕೀತು!