Water problem: ಮಂಗಳೂರಿನಲ್ಲಿ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ…! ಯಾಕೆ ಗೊತ್ತಾ?
Water problem in Mangalore: ಮಂಗಳೂರು: ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ(drinking water) ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಲಭ್ಯವಿರುವ ಪರ್ಯಾಯ ನೀರಿನ ಮೂಲಗಳನ್ನು ಸಂರಕ್ಷಿಸಿ, ಪುನರುಜ್ಜೀವನಗೊಳಿಸಬೇಕು ಎಂದ ಅವರು, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಶೀಘ್ರದಲ್ಲಿ ಕೈಗೊಂಡು ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಇನ್ನು ಮಂಗಳೂರು ನಗರದಲ್ಲಿ(Water problem in Mangalore) ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ(water supply) ವ್ಯತ್ಯಯವಾಗಲಿದೆ . ಮಂಗಳೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 27ರ ಬೆಳಗ್ಗೆ 6 ಗಂಟೆಯಿಂದ 29ರ ಬೆಳಗ್ಗಿನ 6 ಗಂಟೆಯವರೆಗೆ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತವಾಗಲಿದೆ. ತುಂಬೆ ಅಣೆಕಟ್ಟಿನ ಪಂಪಿಂಗ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾರ್ಯಗಳನ್ನು ಸುಗಮಗೊಳಿಸುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಮನವಿ ಮಾಡಿಕೊಂಡಿದ್ದಾರೆ. ಅಣೆಕಟ್ಟಿನ ಎಚ್‌ಎಲ್‌ಪಿಎಸ್ 2- 80 ಎಂಎಲ್‌ಡಿ ರೇಚಕ ಸ್ಥಾವರದಲ್ಲಿರುವ 1,200 ಎಂ.ಎಂ. ವ್ಯಾಸದ ಕೊಳವೆ ದುರಸ್ತಿ ಕಾಮಗಾರಿ ಮತ್ತು ಎಲ್‌ಎಲ್‌ಪಿಎಸ್-1 ಪಂಪ್ ನಂಬ್ರ-2ರ ಹೆಡರ್ ಬದಲಾವಣೆ ಮತ್ತು ಇತರ ಪೂರಕ ಕಾಮಗಾರಿ ನಡೆಯಲಿದೆ.
ಇದನ್ನು ಓದಿ: Woman health problems: ಮಹಿಳೆಯರೇ ಎಚ್ಚರ! ಈ ಲಕ್ಷಣಗಳು ನಿಮ್ಮಲ್ಲಿ ಕಾಣಿಸಿಕೊಂಡ್ರೆ ನಿರ್ಲಕ್ಷ್ಯ ಮಾಡಬೇಡಿ!!