Karnataka Rain: ಸೈಕ್ಲೋನ್ ಎಫೆಕ್ಟ್! ಬರಲಿದೆ ಬಿರುಸಾದ ಮಳೆ, 2 ದಿನ ಎಲ್ಲೋ ಅಲರ್ಟ್!
Karnataka Rain: ರಾಜ್ಯದ ಕೆಲವೆಡೆ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ. ಇದಲ್ಲದೇ, ಕೆಲ ರಾಜ್ಯದಲ್ಲಿ ವರುಣ ದರ್ಶನ ನೀಡಿದ ಹಿನ್ನೆಲೆ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಅದರಲ್ಲಿಯೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆರಾಯ ಅಬ್ಬರಿಸಲಿರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲ್ಮೈ ಸುಳಿಗಾಗಿ ಸೈಕ್ಲೋನ್(Cyclone) ರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ, ತಮಿಳುನಾಡಿನ ಕರಾವಳಿಯಲ್ಲಿ ‘ಚಂಡಮಾರುತ’ ಕಾಣಿಸಿಕೊಳ್ಳುವ ಸಂಭವವಿರುವುದರಿಂದ (Weather Update) ಕರ್ನಾಟಕದ (Karnataka Rain) ಕರಾವಳಿ ಭಾಗ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗಲಿದ್ದು, ಒಂದೆರಡು ದಿನ ಲಘು ಮಳೆಯಾಗುವ ಸಂಭವವಿದ್ದು, ನಂತರದ ದಿನಗಳಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಜೊತೆಗೆ ವರುಣ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಬಳ್ಳಾರಿ, ಮೈಸೂರು, ಚಿಕ್ಕಮಗಳೂರು, ವಿಜಯನಗರ, ತುಮಕೂರು, ಚಾಮರಾಜನಗರ, , ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳ ಹೆಚ್ಚಿನ ಎಲ್ಲಾ ಕಡೆಗಳಲ್ಲಿ ಏಪ್ರಿಲ್ 29 ಮತ್ತು 30 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರುಣ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹೀಗಾಗಿ, ಏಪ್ರಿಲ್ 26 ಮತ್ತು 29ರಂದು ಎರಡು ದಿನ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಇದನ್ನೂ ಓದಿ: Pooja Hegde:ಸಲ್ಮಾನ್ ಬೆಡಗಿ, ಮಂಗಳೂರಿನ ಕಾಡಿನಲ್ಲಿ ಓಡಾಟ! ಯಾವ ಹಣ್ಣಿನ ಹುಡುಕಾಟದಲ್ಲಿ ಪೂಜಾ?