Geeta Shivraj Kumar: ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್‌ ಕುಮಾರ್‌

Share the Article

Geeta Shivraj Kumar: ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗುತ್ತಿದ್ದು, ಇದೀಗ ನಾಳೆ ಕೆಪಿಸಿಸಿ ಕಚೇರಿಯಲ್ಲಿ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar)  ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.

ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್, ನಾಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ತಿಳಿದು ಬಂದಿದೆ. ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.

 

ಇದನ್ನು ಓದಿ: Cough syrup: ಭಾರತದ ಸಂಸ್ಥೆ ತಯಾರಿಸಿದ ಮತ್ತೊಂದು ಕೆಮ್ಮಿನ ಸಿರಪ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ ಕರೆ!! 

Leave A Reply