ಬೆಳ್ತಂಗಡಿ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!

Share the Article

ಬೆಳ್ತಂಗಡಿ: ನೀಟ್‌ ವಿದ್ಯಾಭ್ಯಾಸ ಮಾಡಲೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಕಡಿಮೆ ಅಂಕ ಬಂತೆಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಎ.28ರಂದು ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್‌ (19 ವರ್ಷ) ಎಂಬಾಕೆಯೇ ಮೃತ ಪಟ್ಟ ವಿದ್ಯಾರ್ಥಿನಿ. ಕುವೆಟ್ಟು ಸಮೀಪದ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್‌ ಕೋರ್ಸ್‌ ಪ್ರವೇಶಕ್ಕಾಗಿ ಲಾಂಗ್‌ ಟರ್ಮ್‌ ನೀಟ್‌ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಈ ವಿದ್ಯಾರ್ಥಿನಿ, ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಮನನೊಂದು ಜೊತೆಗೆ ಮುಂದಿನ ನೀಟ್‌ ಪರೀಕ್ಷೆಯ ಭಯದ ಕಾರಣ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಪ್ರಕರಣದ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply