J.P.Nadda: ದಿ.ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

Share the Article

Mr.Praveen Nettaru : ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಜೆಪಿ ನಡ್ಡಾ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು (Mr.Praveen Nettaru)ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.

ಬಳಿಕ ಪತ್ರಕರ್ತರ ಜತೆ ಮಾತನಾಡಿ, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆಬಿಜೆಪಿ ಸದಾ ಇರಲಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ, ಇನ್ನು ಕೆಲವೇ ದಿನಗಳಲ್ಲಿ ನಿನ್ನನ್ನು ಬೆತ್ತಲೆಗೊಳಿಸುವೆ

Leave A Reply