Rain alert: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ; ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಮಳೆ, ಯಲ್ಲೋ ಅಲರ್ಟ್‌ ಘೋಷಣೆ!!

Share the Article

Rain alert:ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ವಿಪರೀತ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ(rain alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ಬಿಸಲಿನ ಶಾಖದಿಂದ ಬೆಂದಿದ್ದ ಜನರಿಗೆ ಮಳೆಯ ಸಿಂಚನವಾಗಲಿದೆ. ನಿನ್ನೆ ಸಿಟಿಯಲ್ಲಿ ಭರ್ಜರಿ ಮಳೆಯಾಗಿದ್ದು, ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಈಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ ಮೂರು ದಿನಗಳ‌ ಕಾಲ ಯಲ್ಲೋ ಅಲರ್ಟ್ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮಾನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ಇದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕಾರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ನಾಳೆಯಿಂದ ಎರಡು ದಿನ ಯಲ್ಲೋ ಅಲರ್ಟ್ ನೀಡಿದ್ದು ಇಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೋತಿಯ ಚೇಷ್ಟೆಗೆ ಯುವತಿ ತಬ್ಬಿಬ್ಬು, ರಸಿಕತನ ಯಾರಪ್ಪನ ಸೊತ್ತೂ ಅಲ್ಲ ಅಂತಾ ಕೋತಿ ?!

Leave A Reply