Basavaraj Bommai: ಕಾಂಗ್ರೆಸ್ಸಿಗರೇ ಎಚ್ಚರ!.. ಭಜರಂಗದಳದ ಸಹವಾಸಕ್ಕೆ ಬಂದ್ರೆ ಏನಾಗ್ತೀರಾ ಗೊತ್ತಾ? ಹನುಮ ಭಕ್ತರು ಸಿಡಿದೆದ್ದರೆ ಏನು ಮಾಡ್ಬೋದೆಂದು ಯೋಚ್ಸಿದ್ದೀರಾ?

Basavaraj Bommai: ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಕರ್ನಾಟಕ ಕಾಂಗ್ರೆಸ್‌ ಪಕ್ಷ (Karnataka Congress) ಇಂದು ತನ್ನ ಪ್ರಣಾಳಿಕೆ (Congress Manifesto) ಬಿಡುಗಡೆ ಮಾಡಿ, ಅದರಲ್ಲಿ ಅಧಿಕಾರಕ್ಕೆ ಬಂದ್ರೆ ಭಜರಂಗದಳ ನಿಷೇಧ (Bajrang Dal Karnataka Ban) ಮಾಡ್ತೇವೆ ಎಂದು ಪ್ರಸ್ತಾಪಸಿದ್ದು, ಇಡೀ ನಾಡಿನ ಹನುಮ ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಇದರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರತಿಕ್ರಿಸಿ ಕಾಂಗಿಗಳಿಗೆ ಎಚ್ಚರಿಕೆಯನ್ನ ಕೊಟ್ಟಿದ್ದಾರೆ.

ಹೌದು, ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅದನ್ನು ಬ್ಯಾನ್ ಮಾಡುತ್ತೆವೆ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಬಜರಂಗದಳ ಬ್ಯಾನ್ ಮಾಡಲು ಮುಂದಾದ ನಿಮ್ಮ ಸರ್ಕಾರ ಹಾಗೂ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡದ ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಪರವಾಗಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ್ರೋಹಿ ಪಿ.ಎಫ್.ಐ ಬ್ಯಾನ್ ಮಾಡಿದ್ದಾರೆ. ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈ ದೇಶದ ಇತಿಹಾಸ, ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸುವ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಘೋಷಿಸಿದೆ, ಸಂಘಟನೆಗೆ ಹೋದರೆ ಹನುಮ ಭಕ್ತರು ನಿಮ್ಮ ಪಕ್ಷವನ್ನು ಬೇಧಿಸಿದ್ದಾರೆ. ಸಮೇತ ಕಿತ್ತೊಗೆಯುತ್ತಾರೆ” ಎಂದರು.

ಬಳಿಕ ಮಾತನಾಡಿದ ಅವರು “ಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್ ಅವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿ ಎಂದು ಹೇಳಿದರು. ನಾವು ಎಲ್ಲ ಸಮಾಜಗಳಿಗೆ ನ್ಯಾಯ ಕೊಟ್ಟಿದ್ದೀವಿ. ಆದರೆ ಅವರು ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋಗಿದ್ದಾರೆ. ಈಗ ಈ ಕಾಂಗ್ರೆಸ್ ಅವರು ನಮ್ಮ ಬಜರಂಗ ದಳದ ಸುದ್ಧಿಗೂ ಬಂದಿದ್ದಾರೆ. ಇದು ಅವರಾಗೇ ವಿನಾಶವನ್ನು ತಂದೊಡ್ಠುವುದು ನಿಶ್ಚಿತ ಎಂದರು. ಅಲ್ಲದೆ ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗ್ತಿದ್ರೆ, ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗ್ತಿದೆ ಎಂದು ಹೇಳಿದ್ದಾರೆ.

ಸಬ್ ಕೆ ಸಾಥ್, ಸಬ್ ಕೆ ವಿಕಾಸ್ ಎನ್ನುವುದು ನಮ್ಮ ಸರ್ಕಾರ ಮಾಡುತ್ತಿದೆ. ಅದನ್ನು ನೀವು ಮನೆಮನೆಗೆ ಹೋಗಿ ಜನರಿಗೆ ತಿಳಿಸಬೇಕು. ರಾಜಕಾರಣದಲ್ಲಿ ಜನ ಬಹಳ ಮಾತನಾಡುತ್ತಾರೆ. ಆದ್ರೆ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಏನನ್ನೂ ಮಾತನಾಡದೇ ಕೆಲಸ ಮಾಡಿ ತೋರಿಸುವ ವ್ಯಕ್ತಿ. ತಾಲ್ಲೂಕಿನ ಅಭಿವೃದ್ಧಿಗೆ ಶಂಕರ ಪಾಟೀಲ್ ಮುನೇನಕೊಪ್ಪ ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇನಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಕಾಂಗ್ರೆಸ್ ನವರಿಗೆ ತಾಕತ್ತಿದ್ದರೆ ಬಜರಂಗದಳ ಬ್ಯಾನ್ ಮಾಡಿ ನೋಡೋಣ. ಡಿ.ಕೆ.ಶಿವಕುಮಾರ ನನ್ನ ನಾಲಿಗೆ ಕತ್ತರಿಸುತ್ತೇನೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: Ayodhya: ಫೇಸ್ಬುಕ್ ಲೈವ್ ಬಂದು ಅಯೋದ್ಯೆ ಅರ್ಚಕ ಆತ್ಮಹತ್ಯೆ : ಕಾರಣ ಕೇಳಿದ್ರೆ ಶಾಕ್ ಆಗ್ತೀರಾ! 

Leave A Reply

Your email address will not be published.