Karnataka SSLC Result 2023: ವಿದ್ಯಾರ್ಥಿಗಳೇ ಗಮನಿಸಿ, ಈ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಸಾಧ್ಯತೆ!

Karnataka SSLC Result 2023: 2022-23ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯು (SSLC Annual Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ಸುಸೂತ್ರವಾಗಿ ಜರುಗಿದ್ದು, ಈ ಬಾರಿ ರಾಜ್ಯದ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ನಡುವೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುವುದು ಯಾವಾಗ? ಎಂಬ ಆತಂಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಕಾಡುತ್ತಿರಬಹುದು. ಮೂಲಗಳ ಪ್ರಕಾರ, ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ (Karnataka SSLC Result 2023) ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಹಿನ್ನಲೆಯಲ್ಲಿ ಚುನಾವಣೆಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಪರೀಕ್ಷಾ ಮಂಡಲಿ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ, ಫಲಿತಾಂಶ ಹೊರ ಬೀಳುವ ಸಂಭವ ಹೆಚ್ಚಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪರಿಶೀಲನೆ ಮಾಡುವ ವಿಧಾನ ಹೀಗಿದೆ:
# ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ karresults.nic.in ಗೆ ಭೇಟಿ ನೀಡಬೇಕು.
# ಈ ಪೇಜ್‌ ಓಪನ್ ಆದ ಬಳಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
# ಆ ಬಳಿಕ, ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಬೇಕು.
# ‘Submit’ ಎಂಬಲ್ಲಿ ಕ್ಲಿಕ್ ಮಾಡಿಕೊಂಡರೆ ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.
# ಈ ಕಾಪಿ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಂಡರೆ ಒಳ್ಳೆಯದು.

Leave A Reply

Your email address will not be published.