Jagadish shettar: ‘ಇದು ನನ್ನ ಕೊನೆಯ ಚುನಾವಣೆ ನನಗೆ ಮತ ನೀಡಿ, ಗೆಲ್ಲಿಸಿ’ ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಘೋಷಣೆ!!

CM Jagadish Shetter announced in pamphlet

Jagadish shettar: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣೆ ಕಾವು ಮತ್ತಷ್ಟು ರಂಗೇರಿದೆ. ಕಾಂಗ್ರೆಸ್‌ (Congress) ಸೇರ್ಪಡೆಯಾಗಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌(Jagadish shettar) ಅವರು ಪ್ರಚಾರದಲ್ಲಿ ತೊಡಗಿದ್ದಾರೆ‌.

 

ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಇದೀಗ ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಿರುಸಿನಲ್ಲಿ ನಡೆಯುತ್ತಿದೆ. ಈ ಮಧ್ಯೆ ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ‘ಇದು ನನ್ನ ಕೊನೆಯ ಚುನಾವಣೆ’ ಎಂದು ಕರಪತ್ರದಲ್ಲಿ ಮುದ್ರಿಸಿ ಘೋಷಿಸಿದ್ದಾರೆ.

ಹುಬ್ಬಳ್ಳಿ ಸೆಂಟ್ರರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್
ಕರಪತ್ರವನ್ನು ಮನೆ ಮನೆಗೆ ಹಂಚುತ್ತಿದ್ದು, “ಈ ಬಾರಿಯ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ. ದಯವಿಟ್ಟು ನನಗೆ ಮತ ನೀಡಿ, ಗೆಲ್ಲಿಸಿ” ಎಂದು ಮತದಾರರಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ.

ಅಂದಹಾಗೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ ಜಗದೀಶ್ ಶೆಟ್ಟರ್‌, ತಮಗೆ ಬಿಜೆಪಿಯಲ್ಲಿ ಆದ ಅಪಮಾನ ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದರಿಂದ ಆ ಪಕ್ಷ ತೊರೆದಿದ್ದೇನೆ. ಇದೀಗ ಕಾಂಗ್ರೆಸ್‌ ಸೇರಿದ್ದೇನೆ. ಈ ಹಿಂದೆಯೂ ನೀವು ನನಗೆ ಬೆಂಬಲಿಸಿದ್ದೀರಿ. ಈಗಲೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸಭೆಯಲ್ಲಿದ್ದವರೆಲ್ಲರೂ ಕೈ ಎತ್ತುವ ಮೂಲಕ ಜಗದೀಶ್​ ಶೆಟ್ಟರ್‌ಗೆ ಬೆಂಬಲ ಸೂಚಿಸಿದರು.

 

ಇದನ್ನೂ ಓದಿ: ಮೋದಿ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ದೊರಕುತ್ತೆ ರೂ.5000! 

Leave A Reply

Your email address will not be published.