Declaration of general holiday: ಚುನಾವಣಾ ಪ್ರಯುಕ್ತ ಮೇ 10 ರಂದು ಸಾರ್ವತ್ರಿಕ ರಜೆ ಘೋಷಣೆ !

Declaration of general holiday on May 10 for election purposes

Declaration of general holiday: ಇದೇ ತಿಂಗಳ ಮೇ 10ರಂದು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರಿಗೆ ಸಾರ್ವರ್ತಿಕ ರಜೆ ಘೋಷಣೆ (Declaration of general holiday) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಹೌದು, ರಾಜ್ಯ ವಿಧಾನಸಭೆಯಲ್ಲಿ ಎಲ್ಲಾ ಮತದಾರರಿಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ(ಅನುದಾನಿತ ಸಂಸ್ಥೆಗಳನ್ನು ಒಳಗೊಂಡಂತೆ) ಎಲ್ಲಾ ಸಂಸ್ಥೆಗಳಿಗೆ ಇದೇ ಮೇ 10ರಂದು ಸಾರ್ವತ್ರಿಕ ರಜೆ ಗೋಷಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಅಲ್ಲದೆ ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ತಪ್ಪದೆ ತಮ್ಮ ತಮ್ಮ ಚುನಾವಣಾ ಕಾರ್ಯಗಳಿಗೆ ಹಾಜರಾಗತಕ್ಕದ್ದು ಎಂದು ಸೂಚಿಸಲಾಗಿದೆ.

ಇದಲ್ಲದೆ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಛೇರಿ ಹಾಗೂ ಶಾಲೆಗಳಿಗೆ ಪೂರ್ವ ತಯಾರಿಗಾಗಿ ಚುನಾವಣೆ ಮುಂಚಿನ ದಿನ ಅಂದರೆ ಮೇ 9 ರಂದು ಹಾಗೂ ಮತ ಎಣಿಕೆ ನಡೆಯುವ ದಿನ ಮೇ 13ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

 

 

ಇದನ್ನು ಓದಿ: Actor Manobala Death: ಖ್ಯಾತ ತಮಿಳು ಹಾಸ್ಯ ನಟ ಮನೋಬಾಲಾ ಇನ್ನಿಲ್ಲ! 

Leave A Reply

Your email address will not be published.