Actor Sarath Babu: ಬಹುಭಾಷಾ ನಟ ಶರತ್ ಬಾಬು ನಿಧನ!

Actor Sharath Babu: ಹಿರಿಯ ನಟ ಶರತ್ ಬಾಬು ( Actor Sarath Babu) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಇರುವ ಕಾರಣ ಇಂದು ಅವರು ನಿಧನ ಹೊಂದಿದ್ದಾರೆ.

 

ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು (Sandalwood Senior Actor Sarath Babu) ಹಲವಾರು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ( Private Hospital ) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತ ಸಂದರ್ಭ ಐಸಿಯುನಲ್ಲಿದ್ದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು.

ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಟ ಶರತ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದರು. ಆದರೆ ಇಂದು ಅವರು ನಿಧನ ಹೊಂದಿದ್ದಾರೆ ಎಂದು ಮೂಲಗಳ ಮೂಲಕ ಮಾಹಿತಿ ಲಭ್ಯವಾಗಿದೆ.

ಶರತ್ ಬಾಬು ದಕ್ಷಿಣ ಚಿತ್ರರಂಗದ ಖ್ಯಾತ ನಟರಾಗಿದ್ದರು. ಕನ್ನಡದಲ್ಲೇ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇಲ್ಲಿಯವರೆಗೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಕೂಡಾ ನಟಿಸಿದ್ದಾರೆ.

ಇವರು ಆಂದ್ರಪ್ರದೇಶದಲ್ಲಿ 1951 ರಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ಮದುವೆಯಾಗಿದ್ದರು. ಆದರೆ ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ. `ರಾಮರಾಜ್ಯಂ’ ತೆಲುಗು ಚಿತ್ರದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಸಿನಿಮಾ 1973 ರಲ್ಲಿ ತೆರೆಕಂಡಿತ್ತು. ಇವರು ಸುಮಾರು 8 ನಂದಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶರತ್ ಬಾಬು ಅವರು ನಾಯಕನಾಗಿ ಮತ್ತು ಪೋಷಕನಟನಾಗಿ ಸಾಕಷ್ಟು ಹೆಸರನ್ನು ಪಡೆದಿದ್ದರು.

ಇದನ್ನೂ ಓದಿ: ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣೆ : ಅಭ್ಯರ್ಥಿಗಳಾಗಿ ಸುಳ್ಯ ಕ್ಷೇತ್ರದವರೇ ಸಿಂಹಪಾಲು

Leave A Reply

Your email address will not be published.