Ban on Sale of Liquor: ಎಣ್ಣೆ ಪ್ರಿಯರಿಗೆ ಆಘಾತಕಾರಿ ಸುದ್ದಿ! ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ಬಂದ್!!!

Ban on sale of liquor for four day in Karnataka

Ban on Sale of Liquor: ಸದ್ಯ ಕರ್ನಾಟಕ ವಿಧಾನಸಭೆಯಲ್ಲಿ ಚುನಾವಣೆಯ (election) ಸಿದ್ಧತೆ ಭರದಿಂದ ಸಾಗುತ್ತಿದ್ದು, ಬರುವ ಮೇ ತಿಂಗಳಿನಲ್ಲಿ ನಡೆಯಬೇಕಾಗಿರುವ ಚುನಾವಣೆಯಲ್ಲಿ ಜನರ ಆಯ್ಕೆ ಯ ಪಾತ್ರವು ಪ್ರಮುಖವಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 10 ರಂದು ಬುಧವಾರದಂದು ಮತದಾನ ನಡೆಯಲಿದ್ದು , ಮೇ 13 ರಂದು ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಪ್ರಯುಕ್ತ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ (Ban on Sale of Liquor:) ಆಗಲಿದೆ.

ಸದ್ಯ ಮತದಾನ ಹಾಗೂ ಮತ ಎಣಿಕೆ ಪ್ರಯುಕ್ತ ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ಬಂದ್ ಆಗಲಿದೆ, ಮೇ 8ರಂದು ಬೆಳಗ್ಗೆ 6 ಗಂಟೆಯಿಂದ ಮದ್ಯದಂಗಡಿಗಳು ಬಂದ್ ಆಗಲಿದೆ, ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಇದು ಮುಂದುವರಿಯಲಿದೆ. ಇನ್ನು ಎಣಿಕೆ ದಿನವಾದ ಮೇ 13 ರಂದು ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ಬಂದ್ ಇರಲಿದೆ.

ಈ ಮೇಲಿನ ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿತ್ತು. ಅದರಂತೆ ಈಗ ಜಿಲ್ಲಾಧಿಕಾರಿಗಳು ಅಯಾ ಜಿಲ್ಲೆಗಳಲ್ಲಿ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದ್ದಾರೆ.

ಒಂದು ವೇಳೆ ಮರು ಮತದಾನ ನಡೆದ ಸಂದರ್ಭದಲ್ಲಿ ಅಲ್ಲಿಯೂ ಸಹ ಈ ಅನ್ವಯ ಆದೇಶವನ್ನು ಮುಂದುವರೆಸುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಚೆಕ್ ಮಾಡೋದು ಹೇಗೆ? ಇಲ್ಲಿದೆ ಉತ್ತರ!

Leave A Reply

Your email address will not be published.