CM Basavaraj Bommai: ಬಜರಂಗದಳ ಹಾಗೂ ಆಂಜನೇಯಗೆ ಏನು ಸಂಬಂಧ? ಡಿಕೆ ಶಿವಕುಮಾರ್​ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಸಿಎಂ ಬೊಮ್ಮಾಯಿ!!

cm basavaraj bommai gives answer to dks question

CM Basavaraj Bommai: ಬಜರಂಗದಳ (Bajarang Dal) ನಿಷೇಧ ಬಗ್ಗೆ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಇದು ಭಾರೀ ವಿವಾದಕ್ಕೀಡಾಗಿತ್ತು. ಈ ಮಧ್ಯೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆಯನ್ನು ನಡೆಸಿದ್ದು, ಈ ವೇಳೆ ಬಜರಂಗದಳ ನಿಷೇಧದ ವಿವಾದದ ಬಗ್ಗೆ ಚರ್ಚೆಯಾಗಿದೆ. ಈ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK shivkumar), ಬಜರಂಗದಳಕ್ಕೂ, ಆಂಜನೇಯನಿಗೂ ಏನು ಸಂಬಂಧವಿದೆ? ನಾನು ಕೂಡ ರಾಮ, ಆಂಜನೇಯ ಹಾಗೂ ಶಿವ ಭಕ್ತ. ನಾನು ಕೂಡ ದಿನವೂ ಹನುಮಾನ್ ಚಾಲೀಸ್ ಪಠಣ ಮಾಡುತ್ತೇನೆ ಎಂದು ಹೇಳಿದ್ದರು.

ಆಂಜನೇಯನಿಗೂ, ಬಜರಂಗದಳಕ್ಕೂ ಯಾವುದೇ ಸಂಬಂಧವಿಲ್ಲ.
ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಅಂದ್ರೆ ಬಿಜೆಪಿಯವರಿಗೆ ಯಾಕೆ ಭಯವೋ ಗೊತ್ತಿಲ್ಲ. ನಮ್ಮ ಗ್ಯಾರಂಟಿ ಐತಿಹಾಸಿಕ ಕಾರ್ಡ್ ಆಗಿದೆ. ನಾವು ಕೊಟ್ಟಿರೋ ಗ್ಯಾರಂಟಿ ಭರವಸೆಯನ್ನು ಈಡೇರಿಸುತ್ತೇವೆ. ಬಜರಂಗದಳ ನಿಷೇಧ ಘೋಷಣೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಡಿಕೆಶಿ ಹೇಳಿದ್ದರು.

ಇದೀಗ ಡಿಕೆಶಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಖಡಕ್ ಉತ್ತರ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ ಡಿಕೆ ಶಿವಕುಮಾರ್ (D. K. Shivakumar) ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ? ಎಂಬ ಹೇಳಿಕೆ ನೀಡಿದ್ದರು. ‘ರಾಮನಿಗೂ ಹನುಮನಿಗೂ ಯಾವ ರೀತಿ ಸಂಬಂಧ ಇದೆಯೋ, ಅದೇ ರೀತಿಯ ಸಂಬಂಧ ಹನುಮನಿಗೂ ಬಜರಂಗದಳಕ್ಕೂ ಇದೆ. ಇದನ್ನು ಕಾಂಗ್ರೆಸ್ ಪಕ್ಷ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ಸಿಎಂ ಹೇಳಿದರು.

“ಕಾಂಗ್ರೆಸ್ ಪಕ್ಷ ಇಂದು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಕಪಿಮುಷ್ಟಿಯಲ್ಲಿದೆ. ಅದರಿಂದ ಹೊರಬರಲು ಸಾಧ್ಯವಿಲ್ಲ. ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತಾಡ್ತೇವೆ. ಅಂದ್ರೆ, ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಅಸಮಾಧಾನ ಇದೆ. ಪಿ.ಎಫ್.ಐ ನ ಇನ್ನೊಂದು ರೂಪ ಎಸ್.ಡಿ.ಪಿ.ಐ, ಇದರ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು. ಆದ್ರೆ, ಅವರು ಕೊಡಲ್ಲ ಅಂದಿದ್ದಾರೆ. ಅಲ್ಲದೇ, ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡ್ತಿದ್ದಾರೆ” ಎಂದು ಕಾಂಗ್ರೆಸ್​ ವಿರುದ್ದ ವಾಗ್ದಾಳಿ ನಡೆಸಿದರು.

 

ಇದನ್ನೂ ಓದಿ: ಕೊನೆಗೂ ವಿಜಯ್ ನನ್ನ ‘ಲೈಫ್’ ಎಂದೇ ಬಿಟ್ಟಳು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ!

Leave A Reply

Your email address will not be published.