Mocha Cyclone: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅಬ್ಬರಿಸಲಿದೆ ‘ಮೋಚಾ ಚಂಡಮಾರುತ’! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

Cyclone in bay of Bengal and prediction some area got rain in Karnataka

Mocha cyclone: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ(Mocha cyclone) ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

 

ಹವಾಮಾನ ವೈಪರೀತ್ಯದ ಕಾರಣದಿಂದ ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಮಳೆಯಿಂದಾಗಿ ಅನಾಹುತ ಸೃಷ್ಟಿಯಾಗಿದ್ದೂ ಇದೆ. ಆದರೆ ಈ ನಡುವೆ ಮೋಚಾ ಚಂಡಮಾರುತ ಬಂಗಾಳಕೊಲ್ಲಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.

ಹೌದು, ಹವಮಾನ ವೈಪರೀತ್ಯದ ಕಾರಣದಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಈಗಾಗಲೇ ಹಲವೆಡೆ ಮೋಡ ಕವಿದ ವಾತಾವರಣವಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ, ಅಂದರೆ ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ (Cyclon in Bay of Bengal) ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ (ಏ 2) ಎಚ್ಚರಿಕೆ ನೀಡಿದ್ದು, ಕರ್ನಾಟಕದ (Karnataka Rain) ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಅಂದಹಾಗೆ ಮೋಚಾ ಚಂಡಮಾರುತವು ಭಾರತದ ಹಲವು ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರಲಿದ್ದು, ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಅಲ್ಲದೆ ಈ ನಡುವೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೇ 7ನೇ ತಾರೀಕಿನವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್​, ಬೆಳಗಾವಿ, ಕಲರ್ಬುಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮೇ 7 ರವರೆಗೆ ಮಳೆಯಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಐಎಂಡಿಯ ಹವಾಮಾನ ಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, ‘ಚಂಡಮಾರುತದ ಪರಿಚಲನೆ ಆರಂಭವಾದ 48 ಗಂಟೆಗಳಲ್ಲಿ ಅದರ ಪ್ರಭಾವದಿಂದಾಗಿ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳಬಹುದು. ಕೆಲವು ಹವಾಮಾನ ಮುನ್ಸೂಚನೆ ಘಟಕಗಳು ಇದು ಸೈಕ್ಲೋನ್ ಎಂದು ಸೂಚಿಸುತ್ತಿವೆ. ನಾವು ತೀವ್ರ ನಿಗಾ ಇಡುತ್ತಿದ್ದೇವೆ. ಈ ಬಗ್ಗೆ ನಿಯಮಿತವಾಗಿ ಅಪ್​ಡೇಟ್​ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ಕರ್ನಾಟಕ ವಿಧಾನಸಭೆ ಚುನಾವಣೆ, ಕೋಡಿ ಶ್ರೀ ಯಿಂದ ಭವಿಷ್ಯವಾಣಿ!

Leave A Reply

Your email address will not be published.