Rain Alert: ಆಲಿಕಲ್ಲು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ IMD! ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ? ಇಲ್ಲಿದೆ ಕಂಪ್ಲೀಟ್ ವಿವರ
Karnataka weather updates rain alert in these district
Rain alert: ಒಂದು ಕಡೆ ಚುನಾವಣೆಯ ಕಾವು. ಇನ್ನೊಂದು ಕಡೆ ವರುಣನ ಕೃಪೆ ಭೂಮಿಗೆ ಬಿದ್ದದ್ದೇ ತಡ ಈಗ IMD ಮತ್ತೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ (Rain alert) ನೀಡಿದೆ. ಈ ಎಚ್ಚರಿಕೆಯ ಪ್ರಕಾರ ಹಲವು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಆಲಿಕಲ್ಲು ಮಳೆಯ ಬಗ್ಗೆ IMD ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ ಆರಂಭವಾದ ಹಿನ್ನೆಲೆಯಲ್ಲಿ ಮುಂದಿನ ಮೇ.13ರವೆರೆಗೆ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಸಂಭವವಿದೆ ಕೊಡಗು ಹಾಗೂ ಹಾಸನ. ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮೇ.6 ಹಾಗೂ 7ರಂದು ಭಾರೀ ಮಳೆಯಾಗಲಿದೆ.
ಮಂಡ್ಯ, ದೊಡ್ಡಬಳ್ಳಾಪುರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉಡುಪಿ, ಬೆಂಗಳೂರು ನಗರ,ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಕೋಲಾರದಲ್ಲಿ ಮೇ 8 ಹಾಗೂ 9 ರಂದು ಮಳೆಯಾಗಲಿದೆ. ಮೇ 10ರಂದು ದಾವಣಗೆರೆ, ಕೊಡಗಿನಲ್ಲಿ ಮಾತ್ರ ಭಾರೀ ಮಳೆ ಬೀಳಲಿದ್ದು, ಮೇ 12. 13ರಂದು ಹಾಸನ, ಬಾಗಲಕೋಟೆಯ ದಕ್ಷಿಣ, ಮಂಡ್ಯದ ದಕ್ಷಿಣ, ತುಮಕೂರು ದಕ್ಷಿಣ, ಮಂಡ್ಯ, ಚಾಮರಾಜನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಮೈಸೂರಿನ ಪಶ್ಚಿಮ ಭಾಗ ಹಾಗೂ ಬೆಳಗಾವಿಯ ದಕ್ಷಿಣ, ಹಾವೇರಿಯಲ್ಲಿ ಮಳೆಯಾಗಲಿದೆ. ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿಯ ದಕ್ಷಿಣ, ಕೊಡಗು, ಹಾವೇರಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನ, ಸೇರಿ ಹಲವು ಕಡೆ ಮಳೆಯಾಗಲಿದೆ.
ಮೇ 7 ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಮೇ 7 ಮತ್ತು 8 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ ಮತ್ತು ಪುದುಚೇರಿಯಲ್ಲಿ ಮೇ 7 ರಿಂದ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:VTU Exam: ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ! ಮೇ 9, 11ರಂದು ವಿಟಿಯು ಪರೀಕ್ಷೆ ಇಲ್ಲ !